ಉಡುಪಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ವಿಶ್ವ ಹಿಂದೂ ಪರಿಷತ್ ಉಡುಪಿ ಜಿಲ್ಲೆ ವತಿಯಿಂದ ಭಾನುವಾರ ಬೃಹತ್ ಜನಾಗ್ರಹ ಜಾಥಾ ನಡೆಯಿತು.
ಜಿಲ್ಲೆಯ ನಾನಾ ಕಡೆಗಳಿಂದ ಬಂದ ಸಾವಿರಾರು ಹಿಂದೂಗಳು ಭಾಗವಹಿಸಿದ್ದರು. ಉಡುಪಿಯ ಜೋಡುಕಟ್ಟೆಯಿಂದ ಜನಾಗ್ರಹ ಸಭೆ ನಡೆಯುವ ಶ್ರೀಕೃಷ್ಣ ಮಠದ ಪಾರ್ಕಿಂಗ್ ಸ್ಥಳದವರೆಗೆ ಸುಮಾರು 3 ಕಿ.ಮೀ. ದೂರ ಮೆರವಣಿಗೆ ನಡೆಯಿತು.
ಉಡುಪಿ ನಗರದೆಲ್ಲೆಡೆ ಕೇಸರಿ ಭಗವಧ್ವಜಗಳು ಹಾರಾಡುತ್ತಿದ್ದವು. ಜಾತಿ ಮತ ಭೇದ ಮರೆತು ಪುರುಷರು, ಮಹಿಳೆಯರು, ಮಕ್ಕಳು, ಭಗವಧ್ವಜ ಹಿಡಿದು ಜೈ ಶ್ರೀರಾಮ್ ಘೋಷಣೆಯನ್ನು ಉಡುಪಿಯಲ್ಲಿ ಮೊಳಗಿಸಿದರು.
ಈ ವೇಳೆ ಉಡುಪಿ ಕೋರ್ಟ್ ಮುಂಭಾಗ ಶ್ರೀ ಪೇಜಾವರ ಶ್ರೀಪಾದರ ಮುಸ್ಲಿಂ ಅಭಿಮಾನಿಗಳ ವತಿಯಿಂದ ಮೆರವಣಿಗೆಯಲ್ಲಿ ಭಾಗವಹಿಸಿದವರಿಗೆ ಪಾನಕ ವ್ಯವಸ್ಥೆ ಮಾಡಲಾಗಿತ್ತು.
ಜನಾಗ್ರಹ ಜಾಥದಲ್ಲಿ ಬಾಳೆಕುದ್ರು ಮಠದ ಶ್ರೀ ನರಸಿಂಹಾಶ್ರಮ ಸ್ವಾಮೀಜಿ, ಉಡುಪಿ ಶಾಸಕ ರಘುಪತಿ ಭಟ್, ಕಾರ್ಕಳ ಶಾಸಕ ಸುನಿಲ್ ಕುಮಾರ್ ಮತ್ತಿತರು ಪಾಲ್ಗೊಂಡಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…