ಉಡುಪಿ : ಬೆಡ್‌ಶೀಟ್ ಮಾರುವ ನೆಪದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮನೆಯೊಳಗೆ ಅಕ್ರಮವಾಗಿ ಪ್ರವೇಶಿಸಿ ಪರಾರಿಯಾಗಿರುವ ಘಟನೆ ಸೆ.14ರಂದು ಸಂಜೆ ವೇಳೆ ನಡೆದಿದೆ.
ಪಿರ್ಯಾದಿದಾರರಾದ ಕಿರಣ್ ಕಮಾರ್ ಜಿ(56), ಕೆಳಾರ್ಕಳಬೆಟ್ಟು, ಉಡುಪಿ ಇವರ ಸ್ನೇಹಿತ ಪ್ರವೀಣ್ ರವರು ದುಬೈನಲ್ಲಿ ಕೆಲಸವನ್ನು ಮಾಡಿಕೊಂಡಿದ್ದು, ಅವರ ತಾಯಿ ಉಡುಪಿಯ ಅಂಬಲಪಾಡಿ ಕಾರ್ತೀಕ್ ಹೋಟೆಲ್ ಎದುರು ಇರುವ ಶ್ಯಾಂ ಸದನದಲ್ಲಿ ವಿನೋದಿನಿ(82) ಎಂಬವರು ಒಂಟಿಯಾಗಿ ವಾಸ ಮಾಡಿಕೊಂಡಿದ್ದು, ಅಪರಿಚಿತ ವ್ಯಕ್ತಿಯು ಬೆಡ್ ಶೀಟನ್ನು ಮಾರುವ ನೆಪದಲ್ಲಿ ಮನೆಯ ಒಳಗೆ ಅಕ್ರಮವಾಗಿ ಪ್ರವೇಶಿಸಿ ವಿನೋದಿನಿರವರಿಗೆ ಬೆಡ್ ಶೀಟನ್ನು ತೆಗೆದುಕೊಳ್ಳು ವಂತೆ ಒತ್ತಾಯಿಸುತ್ತಿದ್ದನು.
ಇದನ್ನು ಗಮನಿಸಿದ ಮನೆಯ ಕೇರ್ ಟೇಕರ್ ಪ್ಲಂಬಿಂಗ್ ಕೆಲಸಕ್ಕೆ ಬಂದಿದ್ದ ಪ್ರಶಾಂತ್‌ರನ್ನು ಕರೆದಿದ್ದು, ವಾಪಸ್ಸು ಬರುವಷ್ಟರಲ್ಲಿ ಅಪರಿಚಿತ ವ್ಯಕ್ತಿ ಮನೆಯಿಂದ ಪರಾರಿಯಾಗಿ ಕಾರಿನಲ್ಲಿ ವೇಗವಾಗಿ ಹೋಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…