ಉಡುಪಿ: ಆಸ್ಟ್ರೇಲಿಯಾದ ಪ್ರತಿಷ್ಠಿತ ‘ಮಿಸ್ ಯೂನಿವರ್ಸ್ ಆಸ್ಟ್ರೇಲಿಯಾ’ ಗೌರವಕ್ಕೆ ಉಡುಪಿ ಸಮೀಪದ ಬೆಳ್ಮಣ್ಣುವಿನಲ್ಲಿ ಜನಿಸಿರುವ ಪ್ರಿಯಾ ಸೆರಾವೊ ಭಾಜನರಾಗಿದ್ದಾರೆ. ಗುರುವಾರ ರಾತ್ರಿ ಮೆಲ್ಬರ್ನ್ನಲ್ಲಿ ನಡೆದ ‘ಮಿಸ್ ಯೂನಿವರ್ಸ್ ಆಸ್ಟ್ರೇಲಿಯಾ’ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ಪ್ರಿಯಾ ಅವರು ಪ್ರಶಸ್ತಿ ಮುಡಿಗೇರಿಸಿಕೊಂಡರು.
ಕಾರ್ಕಳ ತಾಲೂಕಿನ ಬೆಳ್ಮಣ್ಣು ಮೂಲದವರಾದ ಸೆರಾವೋ ವಿಶ್ವಾದ್ಯಂತದ 26 ದೇಶಗಳ ಸ್ಪರ್ಧಿಗಳನ್ನು ಹಿಂದಿಕ್ಕಿ ಈ ಸಾಧನೆ ಮಾಡಿದ್ದಾರೆ.
27 ವರ್ಷದ ಸೆರಾವೊ, ವಿಕ್ಟೋರಿಯಾ ವಿವಿಯ ಕಾನೂನು ಪದವೀಧರೆಯಾಗಿದ್ದು ಆಸ್ಟ್ರೇಲಿಯಾಕ್ಕೆ 11 ವರ್ಷದವರಾಗಿದ್ದಾಗ ತಮ್ಮ ಕುಟುಂಬದೊಂದಿಗೆ ವಲಸೆ ಬಂದಿದ್ದರು.
26 ವರ್ಷದವರಾಗಿದ್ದು ವಿಕ್ಟೋರಿಯಾ ವಿವಿ ಕಾನೂನು ಪದವೀಧರೆಯಾಗಿರುವ ಪ್ರಿಯಾ ಸೆರಾವೋ ಆಸ್ಟ್ರೇಲಿಯಾ ಮೆಲ್ಬೋರ್ನ್ ನಲ್ಲಿ ಉದ್ಯೋಗದಲ್ಲಿದ್ದಾರೆ. ಅವರಿಗೆ ಹನ್ನೊಂದು ವರ್ಷಗಳಿದ್ದಾಗ ಅವರ ಕುಟುಂಬ ಆಸ್ಟ್ರೇಲಿಯಾಗೆ ವಲಸೆ ಹೋಗಿತ್ತು.
ಸ್ಪರ್ಧೆಯಲ್ಲಿ ವಿಜೇತರಾದ ಬಳಿಕ ಮಾತನಾಡಿದ ಸೆರಾವೋ “ನನ್ನ ಗೆಲುವು ಸಾಂಸ್ಕೃತಿಕ ವೈವಿದ್ಯತೆ ಸಂದ ಗೌರವ” ಎಂದಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…