ಉಡುಪಿ : ಖಾಸಗಿ ಬಸ್ಸೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಬ್ರಹ್ಮಾವರ ಹಂದಾಡಿ ಗ್ರಾಮದ ಅಂಬಿಕಾ ಪಾರಂ ಬಳಿ ಡಿ.19ರಂದು ನಡೆದಿದೆ. ಮೃತರನ್ನು ಪವನ್ ಎಂದು ಗುರುತಿಸಲಾಗಿದೆ.
ಇವರು ತನ್ನ ಬೈಕಿನಲ್ಲಿ ಬಾರ್ಕೂರು ಕಡೆಯಿಂದ ಬ್ರಹ್ಮಾವರ ಕಡೆ ರಸ್ತೆಯಲ್ಲಿ ಬಂದು, ಬಲಗಡೆ ಇಂಡಿಕೇಟರ್ ಹಾಕಿ ಅಂಬಿಕಾ ಫಾರಂ ಬಳಿಯ ಅಮ್ಮ ಶಾಮಿಯಾನ್ ಅಂಗಡಿ ಕಡೆಗೆ ತಿರುಗಿಸುತ್ತಿದ್ದಾಗ ಅದೇ ರಸ್ತೆಯಲ್ಲಿ ಬರುತ್ತಿದ್ದ ಬಸ್, ಬೈಕಿಗೆ ಹಿಂದಿನಿಂದ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರ ಪರಿಣಾಮ ಬೈಕ್ ಸವಾರ ಪವನ್, ಬಸ್ಸಿಗೆ ಬಡಿದು ರಸ್ತೆಗೆ ಬಿದ್ದು ಉರುಳಿಕೊಂಡು ರಸ್ತೆ ಬದಿಯಲ್ಲಿದ್ದ ಹೊಂಡಕ್ಕೆ ಬಿದ್ದರೆನ್ನಲಾಗಿದೆ. ಬಸ್, ಬೈಕ್‌ನ್ನು ಸುಮಾರು 50 ಅಡಿ ದೂರ ರಸ್ತೆಯಲ್ಲಿ ಎಳೆದುಕೊಂಡು ಹೋಗಿ ನಿಂತಿತು. ಅಪಘಾತದಿಂದ ಗಂಭೀರ ವಾಗಿ ಗಾಯಗೊಂಡಿದ್ದ ಪವನ್, ಬ್ರಹ್ಮಾವರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…