Featured

ಉಡುಪಿ : ಬೈಕ್ ಗೆ ಖಾಸಗಿ ಬಸ್ ಡಿಕ್ಕಿ  ; ಸವಾರ ಮೃತ್ಯು – vishwanews24

ಉಡುಪಿ : ಬೈಕ್ ಗೆ ಖಾಸಗಿ ಬಸ್ ಡಿಕ್ಕಿ  ; ಸವಾರ ಮೃತ್ಯು

ಉಡುಪಿ :  ಖಾಸಗಿ ಬಸ್ಸೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಬ್ರಹ್ಮಾವರ ಹಂದಾಡಿ ಗ್ರಾಮದ ಅಂಬಿಕಾ ಪಾರಂ ಬಳಿ ಡಿ.19ರಂದು ನಡೆದಿದೆ. ಮೃತರನ್ನು ಪವನ್ ಎಂದು ಗುರುತಿಸಲಾಗಿದೆ.

ಇವರು ತನ್ನ ಬೈಕಿನಲ್ಲಿ ಬಾರ್ಕೂರು ಕಡೆಯಿಂದ ಬ್ರಹ್ಮಾವರ ಕಡೆ ರಸ್ತೆಯಲ್ಲಿ ಬಂದು, ಬಲಗಡೆ ಇಂಡಿಕೇಟರ್ ಹಾಕಿ ಅಂಬಿಕಾ ಫಾರಂ ಬಳಿಯ ಅಮ್ಮ ಶಾಮಿಯಾನ್ ಅಂಗಡಿ ಕಡೆಗೆ ತಿರುಗಿಸುತ್ತಿದ್ದಾಗ ಅದೇ ರಸ್ತೆಯಲ್ಲಿ ಬರುತ್ತಿದ್ದ ಬಸ್, ಬೈಕಿಗೆ ಹಿಂದಿನಿಂದ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಇದರ ಪರಿಣಾಮ ಬೈಕ್ ಸವಾರ ಪವನ್, ಬಸ್ಸಿಗೆ ಬಡಿದು ರಸ್ತೆಗೆ ಬಿದ್ದು ಉರುಳಿಕೊಂಡು ರಸ್ತೆ ಬದಿಯಲ್ಲಿದ್ದ ಹೊಂಡಕ್ಕೆ ಬಿದ್ದರೆನ್ನಲಾಗಿದೆ. ಬಸ್, ಬೈಕ್‌ನ್ನು ಸುಮಾರು 50 ಅಡಿ ದೂರ ರಸ್ತೆಯಲ್ಲಿ ಎಳೆದುಕೊಂಡು ಹೋಗಿ ನಿಂತಿತು. ಅಪಘಾತದಿಂದ ಗಂಭೀರ ವಾಗಿ ಗಾಯಗೊಂಡಿದ್ದ ಪವನ್, ಬ್ರಹ್ಮಾವರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಮಧ್ಯಪ್ರಾಚ್ಯ ಬಿಕ್ಕಟ್ಟು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆ : ಆರ್‌ಬಿಐ ಗವರ್ನರ್ -vishwanews24

ಮಧ್ಯಪ್ರಾಚ್ಯ ಬಿಕ್ಕಟ್ಟು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆ : ಆರ್‌ಬಿಐ ಗವರ್ನರ್ ನವದೆಹಲಿ : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಬಿಕ್ಕಟ್ಟು…

11 minutes ago

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ – vishwanews24

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ ನವದೆಹಲಿ: ಹಲವು ದಿನಗಳಿಂದ ನಡೆಯುತ್ತಿದ್ದ ಹೈಡ್ರಾಮಕ್ಕೆ ತೆರೆ ಬಿದ್ದಿದ್ದು ಕೇರಳದ ನೂತನ…

17 minutes ago

ಹಿಜಾಬ್‌ಗೆ ಗ್ರೀನ್ ಸಿಗ್ನಲ್ : ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ಭಾರೀ ವಿರೋಧ ; ರಾಜ್ಯಾದ್ಯಂತ  ಉಗ್ರ ಪ್ರತಿಭಟನೆ ಎಚ್ಚರಿಕೆ – vishwanews24

ಹಿಜಾಬ್‌ಗೆ ಗ್ರೀನ್ ಸಿಗ್ನಲ್ : ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ಭಾರೀ ವಿರೋಧ ; ರಾಜ್ಯಾದ್ಯಂತ  ಉಗ್ರ ಪ್ರತಿಭಟನೆ ಎಚ್ಚರಿಕೆ…

24 minutes ago

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago