Featured

ಉಡುಪಿ: ಬ್ಯಾನರ್, ಕಟೌಟ್‌ಗಳಿಗೆ ಅನುಮತಿ ಕಡ್ಡಾಯ – vishwanews24

ಉಡುಪಿ: ಬ್ಯಾನರ್, ಕಟೌಟ್‌ಗಳಿಗೆ ಅನುಮತಿ ಕಡ್ಡಾಯ

ಉಡುಪಿ,: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಅಳವಡಿಸಲಾದ ಬ್ಯಾನರ್, ಬಂಟಿಂಗ್ಸ್, ಕಟೌಟ್‌ಗಳು ಅವಧಿ ಮೀರಿರುವುದು ಕಂಡು ಬಂದಿದ್ದು, ಅಂತಹ ಬ್ಯಾನರ್‌ಗಳನ್ನು ಸಂಬಂಧಪಟ್ಟವರು ಕೂಡಲೇ ತೆರವುಗೊಳಿಸಬೇಕು ಎಂದು ಉಡುಪಿ ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬ್ಯಾನರ್ ಮತ್ತು ಕಟೌಟ್ ಇತರೆ ಅಳವಡಿಸುವ ಪೂರ್ವದಲ್ಲಿ ಕರ್ನಾಟಕ ಮುನಿಸಿಪಲ್ ಆಕ್ಟ್ ನಂತೆ ನಗರಸಭೆ ಕಛೇರಿಯಿಂದ ಅನುಮತಿ ಪಡೆದುಕೊಂಡು ಪ್ರಾರಂಭ ದಿನಾಂಕ, ಮುಕ್ತಾಯ ದಿನಾಂಕ ಹಾಗೂ ಅನುಮತಿ ಪತ್ರ ಸಂಖ್ಯೆಯನ್ನು ನಮೂದಿಸಿ ಅಳವಡಿಸಬೇಕು ಹಾಗೂ ಗೋಡೆಗಳ ಮೇಲೆ ಸಾರ್ವಜನಿಕ ಭಿತ್ತಿಪತ್ರಗಳನ್ನು ಅಂಟಿಸಬಾರದು. ಅಂತಹ ಭಿತ್ತಿಪತ್ರಗಳನ್ನು ಅಂಟಿಸುವ ಮೊದಲು ಸೂಕ್ತ ಸ್ಥಳ ಗುರುತಿಸಿ ಅನುಮತಿ ಪಡೆದಕೊಂಡು ಅಂಟಿಸಬೇಕು.

ಇನ್ನು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಗೋಡೆಗಳ ಮೇಲೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತ ಭಿತ್ತಿಪತ್ರಗಳನ್ನು ಅಂಟಿಸಿದ್ದಲ್ಲಿ ಯಾವುದೇ ಮುನ್ಸೂಚನೆ ನೀಡದೇ ತೆರವುಗೊಳಿಸಲಾಗುವುದು. ನಗರದ ಸೌಂದರ್ಯದ ಹಿತದೃಷ್ಟಿಯಿಂದ ವಿವಿಧೆಡೆ ಭಿತ್ತಿಪತ್ರ ಅಳವಡಿಸುವುದನ್ನು ಕಡಿಮೆ ಮಾಡಬೇಕು. ವಿದ್ಯುತ್ ಕಂಬಗಳ ಮೇಲೆ ಚಿಕ್ಕಚಿಕ್ಕ ಜಾಹೀರಾತು ಫಲಕಗಳನ್ನು ಅಳವಡಿಸಿರುವುದು ಕಂಡು ಬಂದಿದ್ದು, ಇಂತಹ ಅನಧಿಕೃತ ಜಾಹೀರಾತು ಫಲಕಗಳನ್ನು ತೆರವುಗೊಳಿಸಲಾಗುವುದು. ಬ್ಯಾನರ್ಸ್/ಕಟೌಟ್‌ಗಳನ್ನು ಮುದ್ರಿಸುವ ಮಾಲೀಕರು ಈ ಬಗ್ಗೆ ನಗರಸಭೆಯಿಂದ ಅನುಮತಿಯನ್ನು ಪಡೆದುಕೊಂಡು ನಿಗದಿತ ಸ್ಥಳದಲ್ಲಿ ಅಳವಡಿಸಬೇಕು ಹಾಗೂ ಅವಧಿ ಪೂರ್ಣಗೊಂಡ ಕೂಡಲೇ ತೆರವುಗೊಳಿಸುವಂತೆ ಉಡುಪಿ ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago