ಉಡುಪಿ, : ಬಿಲ್ಲವ ಸಮುದಾಯ ಹಲವು ಸಮಸ್ಯೆಗಳಿಗೆ ಪರಿಹಾರ ಹಾಗೂ ಆರ್ಥಿಕವಾಗಿ ಇನ್ನಷ್ಟು ಚೇತನ ನೀಡುವ ನಿಟ್ಟಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ನಿಗಮ ಸ್ಥಾಪಿಸುವ ಬಗ್ಗೆ ಸರಕಾರ ಚಿಂತನೆ ನಡೆಸಿದೆ ಎಂದು ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಉಡುಪಿ ಜಿಲ್ಲಾಡಳಿತದ ಆಶ್ರಯದಲ್ಲಿ ಉಡುಪಿ ಬನ್ನಂಜೆಯ ಬಿಲ್ಲವರ ಸೇವಾ ಸಂಘದ ಸಹಕಾರದೊಂದಿಗೆ ಸೋಮವಾರ ಬನ್ನಂಜೆ ಶ್ರೀನಾರಾಯಣ ಗುರು ಮಂದಿರದ ಸಭಾಂಗಣದಲ್ಲಿ ಆಯೋಜಿಸಲಾದ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಈ ಬಗ್ಗೆ ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸಿದ್ದು, ಇದಕ್ಕೆ ಅವರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ. ಇನ್ನೊಂದು ಸುತ್ತಿನ ಮಾತುಕತೆಯ ಬಳಿಕ ಈ ಸಂಬಂಧ ಅತ್ಯಂತ ಶೀಘ್ರವೇ ಕಾರ್ಯ ಯೋಜನೆಗಳನ್ನು ರೂಪಿಸಲಾಗುವುದು. ಮುಂದೆ ನಿಗಮದ ಘೋಷಣೆಯನ್ನು ಮಾಡಲಾಗುವುದು ಎಂದರು.
ಕಾರ್ಕಳ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಮಂಜುನಾಥ್ ಕೋಟ್ಯಾನ್ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಕೆ.ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್.ನಾಯಕ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಬನ್ನಂಜೆ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಆನಂದ ಪೂಜಾರಿ, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಪಂ ಸಿಇಓ ಡಾ. ನವೀನ್ ಭಟ್, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಉಪಸ್ಥಿತರಿದ್ದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…