ಉಡುಪಿ, : 2019ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕಾಗಿ ಬ್ರಹ್ಮಾವರ ವೃತ್ತ ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭ, ಉಡುಪಿ ಎಸ್ಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಎಚ್‌ಸಿಗಳಾದ ಶಿವಾನಂದ ವಿ.ಶೆಟ್ಟಿ ಮತ್ತು ಬಿ.ಶಿವಾನಂದ ಆಯ್ಕೆಯಾಗಿದ್ದಾರೆ.
ಎಂ.ಎಸ್ಸಿ(ಬಯೋ ಸೈನ್ಸ್) ಸ್ನಾತಕೋತ್ತರ ಪದವೀಧರರರಾದ ಮಂಗಳೂರು ಮೂಲದ ಅನಂತ ಪದ್ಮನಾಭ, 2003ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದರು. ಅವರು ಎಸ್ಸೈ ಆಗಿ ದ.ಕ., ಉತ್ತರ ಕನ್ನಡ, ಬೆಂಗಳೂರು ಧಾರವಾಡ ಮತ್ತು 2011ರಿಂದ ಪೊಲೀಸ್ ನಿರೀಕ್ಷಕರಾಗಿ ಮಂಗಳೂರು, ಮುಲ್ಕಿ, ಮೂಡಬಿದರೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಕಳೆದ ಒಂದು ವರ್ಷ ದಿಂದ ಇವರು ಬ್ರಹ್ಮಾವರ ವೃತ್ತ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
2005ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡ ಕೋಟ ನಿವಾಸಿ ಬಿ. ಶಿವಾನಂದ, ಮಲ್ಪೆ ಪೊಲೀಸ್ ಠಾಣೆಯಲ್ಲಿ ಮತ್ತು 2009ರಿಂದ ಎಸ್ಪಿ ಕಚೇರಿಯಲ್ಲಿ ಅಪರಾಧ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಳೆದ ಎರಡು ಚುನಾವಣೆಯಲ್ಲಿ ಎಸ್ಪಿ ಕಚೇರಿಯ ಚುನಾವಣಾ ಕೋಶದಲ್ಲಿ ಮಾಡಿ ರುವ ಕಾರ್ಯವನ್ನು ಗುರುತಿಸಿ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ ಮಾಡಲಾಗಿದೆ.
2002ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡ ಪಡುಬಿದ್ರಿ ನಿವಾಸಿ ಶಿವಾನಂದ ವಿ. ಶೆಟ್ಟಿ, ಉಡುಪಿ ಸಂಚಾರ ಪೊಲೀಸ್ ಠಾಣೆ ಮತ್ತು 2009 ರಿಂದ ಎಸ್ಪಿ ಕಚೇರಿಯ ಸಿಡಿಆರ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…