ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ ಬಳಿಯ ‘ಭಗವತಿ ಟೂರಿಸ್ಟ್’ ಬಸ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ, ಸಾಮಾಜಿಕ ಧುರೀಣ ವಿನಯ್ ರಾಜ್ (51) ಅವರು ಅಲ್ಪಕಾಲದ ಅಸೌಖ್ಯದಿಂದ ಸೋಮವಾರ(ಆ.10) ಬೆಳಗ್ಗೆ ನಿಧನ ಹೊಂದಿದರು.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕಳೆದ ಮೂರು ದಶಕಗಳಿಂದ ಟೂರಿಸ್ಟ್ ಬಸ್ ಬುಕ್ಕಿಂಗ್ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ವಿನಯ್ ರಾಜ್ ಅವರು, ಉಡುಪಿಯ ಸಾರಿಗೆ ವಲಯದಲ್ಲಿ ಚಿರಪರಿಚಿತರಾಗಿದ್ದರು.
ವ್ಯವಹಾರದ ಜೊತೆಗೆ ಸಾಮಾಜಿಕ ಹಾಗೂ ಧಾರ್ಮಿಕ ರಂಗದಲ್ಲೂ ಸಕ್ರಿಯರಾಗಿದ್ದ ಇವರು, ಟೂರಿಸ್ಟ್ ಹಾಗೂ ಸರ್ವೀಸ್ ಬಸ್ ಸಂಘದ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ದೀರ್ಘಕಾಲದ ಕೋಶಾಧಿಕಾರಿಯಾಗಿ ಮತ್ತು ಅಧ್ಯಕ್ಷರಾಗಿಯೂ ದಕ್ಷತೆಯಿಂದ ಸೇವೆ ಸಲ್ಲಿಸಿದ್ದರು.
ಮೃತರು ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…