ಉಡುಪಿ: ಜಿಲ್ಲೆಯಲ್ಲಿ ಭತ್ತದ ಕಟಾವು ಆರಂಭಗೊಳ್ಳುತ್ತಿದ್ದು, ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಲ್ಲಿ ,ಉಡುಪಿ,ಕಾರ್ಕಳ ಮತ್ತು ಕುಂದಾಪುರದಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯುವ ಕುರಿತಂತೆ ತಕ್ಷಣ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು.
ಅವರು ಇತ್ತೀಚೆಗೆ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ನಡೆದ, ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೇಂದ್ರ ಸರ್ಕಾರವು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸಾಮಾನ್ಯ ಭತ್ತಕ್ಕೆ ಪ್ರತೀ ಕ್ವಿಂಟಾಲ್ ಗೆ ರೂ.1940 ಮತ್ತು ಗ್ರೇಡ್ ಎ ಭತ್ತಕ್ಕೆ ರೂ. 1960 ದರ ನಿಗಧಿಪಡಿಸಿದ್ದು, ಜಿಲ್ಲೆಯ ರೈತರಿಂದ ಭತ್ತ ಖರೀದಿಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಭತ್ತ ಖರೀದಿ ಕೇಂದ್ರಗಳಿಗೆ ಗ್ರೇಡರ್ ಗಳನ್ನು ನೇಮಿಸುವಂತೆ ಮತ್ತು ಗೋದಾಮು ಗಳನ್ನು ಸಿದ್ದಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈಗಾಗಲೇ ಜಿಲ್ಲೆಯ 20 ಅಕ್ಕಿ ಮಿಲ್ಲುಗಳ ಮಾಲೀಕರು ಭತ್ತವನ್ನು ಹಲ್ಲಿಂಗ್ ಮಾಡಿಕೊಡಲು ಒಪ್ಪಿದ್ದು, ಜಿಲ್ಲೆಯ ರೈತರು ಬೆಳೆದ ಎಫ್.ಎ.ಕ್ಯೂ ಮಾದರಿಯ ಎಂಓ 04, ಜಯ,ಕಜೆ ಜಯ,ಜ್ಯೋತಿ ಬತ್ತದ ತಳಿಗಳನ್ನು ಬೆಂಬಲ ಬೆಲೆ ಯೋಜನೆಯಲ್ಲಿ ಖರೀದಿಸಿ, ಸಾರ್ವಜನಿಕ ವಿತರಣಾ ಪದ್ದತಿಯಲ್ಲಿ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಕೃಷಿ, ತೋಟಗಾರಿಕೆ, ಸಹಕಾರ ಇಲಾಖೆ ಮತ್ತು ಕೃಷಿ ಮಾರಾಟ ಇಲಾಖೆ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…