ಉಡುಪಿ : ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ, ಮಹಿಳಾ ಕಾಂಗ್ರೆಸ್ ಸಮಿತಿ ಹಾಗೂ ಯುವ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ ದಾಳಿ ಖಂಡಿಸಿ ಹಾಗೂ ಈ ದುರ್ಘಟನೆಯಲ್ಲಿ ಬಲಿಯಾದವರಿಗೆ ಉಡುಪಿ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ಶುಕ್ರವಾರ ಮೇಣದ ಬತ್ತಿ ಹೊತ್ತಿಸಿ ಶ್ರದ್ಧಾಂಜಲಿ ಸಮರ್ಪಿಸಲಾಯಿತು
.ಸಭೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಇದೊಂದು ಹೇಯ ಕೃತ್ಯ. ಇಡೀ ದೇಶವೇ ನೋವಿನಲ್ಲಿ ಮುಳುಗಿದೆ. ಭಯೋತ್ಪಾದಕರಿಗೆ ಜಾತಿ, ಧರ್ಮ ಎಂಬುದು ಇಲ್ಲ. ಈ ಕೃತ್ಯವನ್ನು ಇಡೀ ದೇಶದ ಎಲ್ಲ ವರ್ಗದ ಜನರು ಒಕ್ಕೋರಲಿನಿಂದ ಖಂಡಿಸಿದ್ದಾರೆ. ಭಯೋತ್ಪಾದನೆ ಧಮನ ಮಾಡಲು ಕೇಂದ್ರ ಸರಕಾರ ಎಲ್ಲ ರೀತಿಯ ಸಹಕಾರ ವನ್ನು ಕಾಂಗ್ರೆಸ್ ನೀಡುತ್ತಿದೆ. ಇದಕ್ಕೆ ಸರಿಯಾದ ಪ್ರತ್ಯುತ್ತರವನ್ನು ಸರಕಾರ ನೀಡ ಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಎಂ.ಎ.ಗಫೂರ್, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಮಮತಾ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಜ್ಜನ್ ಶೆಟ್ಟಿ, ಮುಖಂಡರಾದ ಪ್ರಖ್ಯಾತ್ ಶೆಟ್ಟಿ, ನಾಗೇಶ್ ಕುಮಾರ್ ಉದ್ಯಾವರ, ಜ್ಯೋತಿ ಹೆಬ್ಬಾರ್, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಸರ್ಫುದ್ದೀನ್ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…