Featured

ಉಡುಪಿ : ಭವ್ಯ ಶೋಭಾ ಯಾತ್ರೆಯೊಂದಿಗೆ ಲಕ್ಷಾಂತರ ಮಂದಿ ಭಕ್ತರ ಜೊತೆಗೆ ಅದ್ದೂರಿಯಾಗಿ ಜರುಗಿದ ಪುತ್ತಿಗೆ ಪರ್ಯಾಯ ಮಹೋತ್ಸವ – vishwanews24

ಉಡುಪಿ : ಭವ್ಯ ಶೋಭಾ ಯಾತ್ರೆಯೊಂದಿಗೆ ಲಕ್ಷಾಂತರ ಮಂದಿ ಭಕ್ತರ ಜೊತೆಗೆ ಅದ್ದೂರಿಯಾಗಿ ಜರುಗಿದ ಪುತ್ತಿಗೆ ಪರ್ಯಾಯ ಮಹೋತ್ಸವ

ಉಡುಪಿ: ಪುತ್ತಿಗೆ ಶ್ರೀಗಳ ಪರ್ಯಾಯ ಮಹೋತ್ಸವದ ಭವ್ಯ ಶೋಭಾ ಯಾತ್ರೆ ಗುರುವಾರ ಬೆಳಗಿನ ಜಾವ ಅದ್ದೂರಿಯಾಗಿ ಜರುಗುವುದರೊಂದಿಗೆ ಲಕ್ಷಾಂತರ ಮಂದಿ ಭಕ್ತರು ಸಾಕ್ಷಿಯಾದರು.

ಕಾಪು ದಂಡಯಾತ್ರೆ ಮಧ್ಯರಾತ್ರಿ ಸ್ನಾನ ಮುಗಿಸಿದ ಯತಿಗಳು, ಪಟ್ಟದ ದೇವರಿಗೆ ಪೂಜೆ ಸಲ್ಲಿಸಿ ಜೋಡುಕಟ್ಟೆ ಆಗಮಿಸಿದರು. ಬಳಿಕ ವೈಭವದ ಮೆರವಣಿಗೆ ಆರಂಭವಾಯಿತು. ಅಲ್ಲಿಂದ ಹೊರಟ ಮೆರವಣಿಗೆ ಕೋರ್ಟ್ ರಸ್ತೆ, ಹಳೆಯ ಡಯನಾ ಸರ್ಕಲ್, ಐಡಿಯಲ್ ಸರ್ಕಲ್, ತೆಂಕಪೇಟೆ ಮಾರ್ಗವಾಗಿ ರಥಬೀದಿಗೆ ಸಾಗಿ ಬಂತು.

ಮೆರವಣಿಗೆಯಲ್ಲಿ ಸಾಗಿದ ಜನಪದ ಕಲಾ ಪ್ರಕಾರಗಳು ಕಣ್ಮನ ಸೆಳೆದವು. ಸ್ತಬ್ಧಚಿತ್ರಗಳು, ಚೆಂಡೆಯ ನಾದ ಮೆರವಣಿಗೆಯ ಅಂದ ಹೆಚ್ಚಿಸಿದವು. ಜಗ್ಗಲಿಕೆ ವಾದ್ಯ, ಶ್ರೀಸಾಯಿ ಚೆಂಡೆ ಬಳಗ, ಪೂಜೆ ಕುಣಿತ, ಗೊರವರ ಕುಣಿತ, ಕೊಂಬು ಕಹಳೆ, ಪುಟಾಣಿಗಳಿಂದ ಮರಕಾಲು ಕುಣಿತ, ಕಂಗೀಲು ನೃತ್ಯ, ನಾಸಿಕ್ ಬ್ಯಾಂಡ್, ಗೊಂಬೆಯಾಟ, ಕೊಂಬೆ ಬಳಗ, ಹರೇ ರಾಮ ಹರೇ ಕೃಷ್ಣ, ಸಹಿತ ವಿವಿಧ ತಂಡಗಳು ಭಾಗಿಯಾಗಿದ್ದವರು ಅಯೋಧ್ಯೆಯ ರಾಮಮಂದಿರದ ಟ್ಯಾಬ್ಲೋ ಆಕರ್ಷಣಿಯವಾಗಿತ್ತು.

ನೂರಾರು ಟ್ಯಾಬ್ಲೋ, ಕಲಾತಂಡಗಳ ಬಳಿಕ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಅವರ ಶಿಷ್ಯ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ವಾಹನದಲ್ಲಿರಿಸಿದ ಪಲ್ಲಕ್ಕಿಯಲ್ಲಿ ಕುಳಿತು ಸಾಗಿದರು.

ಗುರುವಾರ ಮುಂಜಾನೆ ಸುಮಾರು 2.30ಕ್ಕೆ ಜೋಡುಕಟ್ಟೆಯಿಂದ ಆರಂಭಗೊಂಡ ಮೆರವಣಿಗೆ ಸುಮಾರು ಎರಡು ಕಿ.ಮೀ ಸಾಗಿ ರಥಬೀದಿಯಲ್ಲಿ ಸಂಪನ್ನಗೊಂಡಿತು.

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಭಾಳ್ಕರ್, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಶಾಸಕರಾದ ಯಶಪಾಲ್ ಸುವರ್ಣ ಸಹಿತ ಹಲವು ಗಣ್ಯರು ಶೋಭಾಯಾತ್ರೆಯಲ್ಲಿ ಭಾಗಿಯಾದರು.

ಮೆರವಣಿಗೆಯ ಕೊನೆಯಲ್ಲಿ ನಗರಸಭೆಯಿಂದ ನೇಮಕ ಮಾಡಿದ್ದ ಪೌರ ಕಾರ್ಮಿಕರು ಇಡೀ ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾದರು. ಸುರಕ್ಷತೆಯ ದೃಷ್ಟಿಯಿಂದ ಬಿಗು ಪೊಲೀಸ್ ಭದ್ರತೆ ನೀಡಲಾಯಿತು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

12 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

12 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

13 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

13 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

13 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

13 hours ago