ಉಡುಪಿ: ಭಾರತೀಯ ಸೇನಾ ನೇಮಕಾತಿ : ಜಿಲ್ಲೆಯಿಂದ ಸೇನೆಗೆ ಸೇರಲು ಆಸಕ್ತರಿರುವ ಅಭ್ಯರ್ಥಿಗಳಿಗೆ ಉಚಿತ ತರಬೇತಿ -Vishwanews24

ಉಡುಪಿ: ಭಾರತೀಯ ಸೇನೆಯಲ್ಲಿ ಸೇರ್ಪಡೆಯಾಗುವ ಜಿಲ್ಲೆಯ ಅಭ್ಯರ್ಥಿಗಳ ಸಂಖ್ಯೆ ಅತ್ಯಂತ ಕಡಿಮೆ ಇದ್ದು, ಜಿಲ್ಲೆಯಿಂದ ಸೇನೆಗೆ ಸೇರಲು ಆಸಕ್ತರಿರುವ ಅಭ್ಯರ್ಥಿಗಳಿಗೆ ಅಗತ್ಯ ಮಾಹಿತಿ ಮತ್ತು ತರಬೇತಿಯನ್ನು ಜಿಲ್ಲಾಡಳಿತದ ವತಿಯಿಂದ ಉಚಿತವಾಗಿ ನೀಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ತಿಳಿಸಿದ್ದಾರೆ.

ಉಡುಪಿ ಅಜ್ಜರಕಾಡು ಮಹಾತ್ಮಗಾಂಧೀ ಕ್ರೀಡಾಂಗಣದಲ್ಲಿ ಏಪ್ರಿಲ್ 4 ರಿಂದ 14 ರ ವರೆಗೆ ನಡೆಯಲಿರುವ ಸೇನಾ ನೇಮಕಾತಿಗೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿರುವ ಉಡುಪಿ ಜಿಲ್ಲೆಯ ಅಭ್ಯರ್ಥಿಗಳಿಗೆ, ಮಾರ್ಚ್ 15 ರಿಂದ 31 ರವರೆಗೆ ಉಚಿತ ತರಬೇತಿ ಮತ್ತು ಮಾಹಿತಿ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಮಾರ್ಚ್ 12 ರ ಒಳಗೆ ಬೆಳಗ್ಗೆ 9.00 ರಿಂದ ಸಂಜೆ 5 ರ ವರೆಗೆ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಮೊ.ಸಂಖ್ಯೆ. 9480886467 ಅವರನ್ನು ಫೋನ್ ಮೂಲಕ ಅಥವಾ ಖುದ್ದಾಗಿ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

 

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

5 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

7 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

7 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

7 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

8 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

8 hours ago