ಉಡುಪಿ : ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನ – vishwanews24
ಉಡುಪಿ : ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನ
ಉಡುಪಿ : ರಾಜ್ಯ ಸರ್ಕಾರದ ಆದೇಶದಂತೆ ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಸರಾಸರಿ 06 ಸಾವಿರ ಜನಸಂಖ್ಯೆಗೆ ಒಂದರAತೆ ಪುರಸಭೆ ವ್ಯಾಪ್ತಿಯ ಒಟ್ಟು 23 ವಾರ್ಡಗಳಿಗೆ ಸಂಬ0ಧಿಸಿದ0ತೆ 05 ‘ಭಾರತ್ ಜೋಡೋ‘ ಯುವ ಸಂಘಗಳನ್ನು ಸ್ಥಾಪಿಸಲಾಗಿದೆ ಮತ್ತು ಸಂಘಗಳ ಕಾರ್ಯ ಚಟುವಟಿಕೆಗಳಿಗೆ ಶಾಲಾ–ಕಾಲೇಜುಗಳ ಸ್ಥಳಗಳನ್ನು ಗುರುತಿಸಲಾಗಿದೆ.
16 ರಿಂದ 35 ವರ್ಷದೊಳಗಿನ ಅದೇ ವಾರ್ಡ್ ಸ್ಥಳೀಯ ಸಾಮಾನ್ಯ ನಿವಾಸಿಗಳು ಸಂಘದ ಸದಸ್ಯರಾಗಲು ಅರ್ಹರಾಗಿದ್ದು, ಬಿ.ಜಿ.ಬಿ.ಎಸ್ ಪೋರ್ಟಲ್ ಅಥವಾ ಮೊಬೈಲ್ಆಪ್, ಕರ್ನಾಟಕ ಒನ್ ಹಾಗೂ ನಾಗರಿಕ ಸೇವಾ ಕೇಂದ್ರಗಳ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಉಡುಪಿ : ಆ. 28ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ – vishwanews24
ನೋಂದಣಿಗೆ ಆಧಾರ್ ಕಾರ್ಡ್ ಕಡ್ಡಾಯವಾಗಿದ್ದು, ಪ್ರತಿ ಸದಸ್ಯರಿಗೆ ರೂ.10 ನೋಂದಣಿ ಶುಲ್ಕ ನಿಗದಿಪಡಿಸಲಾಗಿದೆ. ನೋಂದಣಿಯಾಗುವ ಪ್ರತಿ ಯುವ ಸಂಘದ ಕಾರ್ಯ ಚಟುವಟಿಕೆಗಳಿಗೆ ಕರ್ನಾಟಕ ಸರ್ಕಾರದಿಂದ ರೂ.10 ಲಕ್ಷ ಅನುದಾನ ನೀಡಲಾಗುತ್ತದೆ. ಆದ್ದರಿಂದ ಪುರಸಭಾ ವ್ಯಾಪ್ತಿಯ ಅರ್ಹ ಯುವಕ/ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳುವAತೆ ಪುರಸಭೆ ಮುಖ್ಯಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
