ಉಡುಪಿ: ಭಾರತ ಫುಟ್ಬಾಲ್ ತಂಡದ ಮಾಜಿ ನಾಯಕ ಉಡುಪಿ ಮೂಲದ ಮಹೇಶ್ ಶೇಖರ ಪದ್ದು ಬಂಗೇರ ಕೋವಿಡ್‍ಗೆ ಬಲಿಯಾಗಿದ್ದಾರೆ.
ಎಂಬತ್ತರ ದಶಕದಲ್ಲಿ ದೇಶದ ಫುಟ್ಬಾಲ್ ತಂಡವನ್ನು ಮುನ್ನಡೆಸಿದ್ದ ಉಡುಪಿ ಮೂಲದ ಶೇಖರ್ ಪದ್ದು ಬಂಗೇರ ಅವರಿಗೆ 74 ವರ್ಷ ವಯಸ್ಸಾಗಿತ್ತು. ಚಿಕ್ಕಂದಿನಲ್ಲೇ ಉಡುಪಿಯಿಂದ ಮುಂಬೈಗೆ ತೆರಳಿ ಅವರು ಜೀವನ ರೂಪಿಸಿಕೊಂಡಿದ್ದರು.
ಭಾರತ ತಂಡದ ಗೋಲ್ ಕೀಪರ್ ಹಾಗೂ ಕ್ಯಾಪ್ಟನ್ ಕೂಡ ಆಗಿದ್ದ ಶೇಖರ್, ಮೂಲತಃ ಉಡುಪಿಯ ಬಡಾನಿಡಿಯೂರಿನವರು. ಶೇಖರ್ ಬಹುಕಾಲ ಮುಂಬೈಯಲ್ಲೇ ವಾಸವಾಗಿದ್ದರು. ಹಲವು ಪ್ರತಿಷ್ಠಿತ ಕ್ಲಬ್-ಸಂಸ್ಥೆಗಳಲ್ಲಿ ಕೋಚ್ ಆಗಿ ಸೇವೆ ಸಲ್ಲಿಸಿದ್ದು, ಈಗಲೂ ತರಬೇತುದಾರರಾಗಿ ಕೆಲಸ ಮಾಡುತ್ತಿದ್ದರು.
ಮುಂಬೈನಲ್ಲಿ ಇದ್ದಾಗಲೇ ಶೇಖರ್ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರು. ಕೆಲ ತಿಂಗಳ ಹಿಂದೆ ಮುಂಬೈನಿಂದ ಉಡುಪಿಗೆ ಆಗಮಿಸಿದ್ದರು. ಬಳಿಕ ಇಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿ ಬ್ರಹ್ಮಾವರದ ಮಹೇಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಶೇಖರ್ ಮೃತಪಟ್ಟಿದ್ದಾರೆ. ಉಡುಪಿಯ ನಗರದ ಮದರ್ ಆಫ್ ಸಾರೋಸ್ ಚರ್ಚ್ ನಲ್ಲಿ ಧರ್ಮಗುರುಗಳ ನೇತೃತ್ವದಲ್ಲಿ ವಿಧಿವತ್ತಾಗಿ ಅಂತಿಮ ಸಂಸ್ಕಾರ ಪ್ರಕ್ರಿಯೆ ನಡೆಯಿತು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…