Featured

ಉಡುಪಿ: ಭಾರಿ ಮಳೆ ಮುನ್ಸೂಚನೆ: ಹಳದಿ ಅಲರ್ಟ್ ಘೋಷಣೆ – vishwanews24

ಉಡುಪಿ: ಭಾರಿ ಮಳೆ ಮುನ್ಸೂಚನೆ: ಹಳದಿ ಅಲರ್ಟ್ ಘೋಷಣೆ

ಉಡುಪಿ: ಭಾರತೀಯ ಹವಾಮಾನ ಇಲಾಖೆ / ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆಯೆಂದು ಸೂಚಿಸಿರುತ್ತಾರೆ.

ಆದ್ದರಿಂದ ಜಿಲ್ಲೆಯಲ್ಲಿ ಜೂನ್ 3 ರಿಂದ ಜೂನ್ 8 ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಈ ದಿನಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಹಿಸಬೇಕಾಗಿರುವುದರಿಂದ ಸಾರ್ವಜನಿಕರಿಗೆ ಈ ಕೆಳಕಂಡAತೆ ಸೂಚನೆಗಳನ್ನು ನೀಡಲಾಗಿದೆ.

ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ನಿಯೋಜನೆಗೊಂಡ ನೋಡಲ್ ಅಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತನ್ನು ನಿಭಾಯಿಸಲು ತಯಾರಿ ಮಾಡಿಕೊಳ್ಳಬೇಕು. ಸಾರ್ವಜನಿಕರು ನದಿ, ನೀರಿರುವ ಪ್ರದೇಶ ಹಾಗೂ ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು ಹಾಗೂ ಸಿಡಿಲಿನ ಸಮಯದಲ್ಲಿ ಸುರಕ್ಷಿತ ಸ್ಥಳದಲ್ಲಿರಬೇಕು.
ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ವಿದ್ಯುತ್‌ಕಂಬ, ಕಟ್ಟಡ, ಮರಗಳ ಹತ್ತಿರ ಅಥವಾ ಕೆಳಗೆ ನಿಲ್ಲದೆ ಮತ್ತು ತಗ್ಗು ಪ್ರದೇಶದಲ್ಲಿ ವಾಸಿಸುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳನ್ನು ತಲುಪಬೇಕು.

ತುರ್ತು ಸೇವೆಗೆ ಶುಲ್ಕರಹಿತ ಸಂಖ್ಯೆ : 1077 ಹಾಗೂ ದೂ.ಸಂಖ್ಯೆ: 0820-2574802 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ
ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 hour ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 hour ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 hours ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

3 hours ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

3 hours ago