ಉಡುಪಿ : ಉಡುಪಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪಿಯು ಕಾಲೇಜು, ಐಟಿಐ ಗೆ ಆ. 19ರಂದು ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶ ಹೊರಡಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ರವರ ಮುನ್ಸೂಚನೆಯಂತೆ, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಚಂಡಮಾರುತ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆ ಉಡುಪಿ ಜಿಲ್ಲೆಗೆ ಮುಂದಿನ ನಾಲ್ಕು ದಿನಗಳ ವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ, ನಿವಾಸಿಗಳು ಮತ್ತು ಪ್ರವಾಸಿಗರು ಇಬ್ಬರೂ ಕಡಲತೀರಗಳು, ನದಿಗಳು ಮತ್ತು ಜಲಪಾತಗಳ ಬಳಿಗೆ ಹೋಗುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಮತ್ತು ಈ ಪ್ರದೇಶಗಳಲ್ಲಿ ಫೋಟೋಗಳು ಮತ್ತು ವೀಡಿಯೊಗಳನ್ನು ತೆಗೆದುಕೊಳ್ಳದಂತೆ ಸೂಚಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಕ್ರಮಗಳನ್ನು ಕೈಗೊಂಡಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…