ಉಡುಪಿ : ಭಾರೀ ಮಳೆಯ ಹಿನ್ನೆಲೆಯಲ್ಲಿ ಜೂ.12 (ನಾಳೆ) ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ರಜೆ ಘೋಷಣೆ ಮಾಡಿ ಆದೇಶಿಸಿದ್ದಾರೆ.
ರಾಜ್ಯದಲ್ಲಿ ಕೆಲವು ದಿನಗಳ ವಿರಾಮದ ಬಳಿಕ ಮುಂಗಾರು ಮತ್ತೆ ವೇಗ ಪಡೆದುಕೊಂಡಿದ್ದು, ಜೂನ್ 14 ರವರೆಗೆ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಇಲಾಖೆಯ ಮಾಹಿತಿ ಪ್ರಕಾರ, ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಕರಾವಳಿ ಕರ್ನಾಟಕ ಸೇರಿದಂತೆ 13 ಜಿಲ್ಲೆಗಳಲ್ಲಿ ಜೂನ್ 14 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೊಷಿಸಲಾಗಿದೆ.
ವಿಜಯಪುರ, ಮೈಸೂರು, ಹಾಸನ, ದಾವಣಗೆರೆ, ಕೊಪ್ಪಳ, ರಾಯಚೂರು, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ನಡುವೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…