Featured

ಉಡುಪಿ ಭಾಷಣ ವಿವಾದ : ತಮ್ಮ ಮತಾಂತರ ಹೇಳಿಕೆ ವಾಪಾಸ್ ಪಡೆದ ಸಂಸದ ತೇಜಸ್ವಿ ಸೂರ್ಯ – Vishwanews24

ಉಡುಪಿ ಭಾಷಣ ವಿವಾದ : ತಮ್ಮ ಮತಾಂತರ ಹೇಳಿಕೆ ವಾಪಾಸ್ ಪಡೆದ ಸಂಸದ ತೇಜಸ್ವಿ ಸೂರ್ಯ – Vishwanews24

ಬೆಂಗಳೂರು: ಉಡುಪಿ ಮಾಡಿದ ಭಾಷಣ ವಿವಾದವಾಗುತ್ತಿದ್ದಂತೆ ಸಂಸದ ತೇಜಸ್ವಿ ಸೂರ್ಯ ತನ್ನ ಹೇಳಿಕೆಯನ್ನು ಹಿಂದಕ್ಕೆ ಪಡೆದಿದ್ದಾರೆ.

ಈ ಬಗ್ಗೆ ತಮ್ಮ ಟ್ವೀಟ್ ಮಾಡಿದ ಅವರು, ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತದಲ್ಲಿ ಹಿಂದೂ ಪುನರುತ್ಥಾನ ಆಗಬೇಕು ಎನ್ನುವ ವಿಷಯದ ಕುರಿತು ಮಾತನಾಡಿದ್ದೆ. ಆದರೆ ನನ್ನ ಭಾಷಣದ ಕೆಲವು ಹೇಳಿಕೆಗಳು ವಿವಾದವನ್ನು ಸೃಷ್ಟಿಸಿವೆ. ಹಾಗಾಗಿ ಹೇಳಿಕೆಗಳನ್ನು ಹಿಂಪಡೆಯುತ್ತೇನೆ ಎಂದಿದ್ದಾರೆ.

ಉಡುಪಿ ಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದ ಅವರು, ಹಿಂದೂ ಸಂಸ್ಕೃತಿ, ಸಮಾಜ, ಪರಂಪರೆ ಉಳಿಬೇಕಾದರೆ ಹಿಂದೂ ಧರ್ಮ ಉಳಿಯಬೇಕು. ಇದಕ್ಕಾಗಿ ಮತಾಂತರವಾಗಿ ಪಾಕಿಸ್ತಾನಕ್ಕೆ ಹೋದವರನ್ನು ಹಿಂದೂ ಧರ್ಮಕ್ಕೆ ಕರೆತರಬೇಕು. ಜೊತೆಗೆ ಚೀನಾ, ಜಪಾನಿಗೆ ಹೋಗಿ ಮತಾಂತರಗೊಂಡವರನ್ನು ಭಾರತಕ್ಕೆ ವಾಪಸ್ ಕರೆಸಿಕೊಳ್ಳಬೇಕು. ಮುಸ್ಲಿಮರು, ಕ್ರೈಸ್ತರನ್ನು ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ ಎಂದು ಹೇಳಿದ್ದರು. ಸಂಸದರ ಈ ಹೇಳಿಕೆಗಳು ವಿವಾದವನ್ನು ಸೃಷ್ಟಿಸಿತ್ತು. ಪ್ರತಿ ಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾಗಿತ್ತು.

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

3 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

9 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

11 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

11 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

12 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

12 hours ago