ಉಡುಪಿ, : ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿ ಜೈಲಿನಲ್ಲಿರುವ ದಿ. ಭಾಸ್ಕರ್ ಶೆಟ್ಟಿ ಅವರ ಪತ್ನಿ ರಾಜೇಶ್ವರಿ ಶೆಟ್ಟಿ ಹಾಗೂ ಪುತ್ರ ನವನೀತ್ ಶೆಟ್ಟಿ ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ತಡೆಯಾಜ್ಞೆ ಕೋರಿ ಮೇಲ್ಮನವಿ ಮತ್ತು ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
ಜು.5 ರಂದು ರಾಜೇಶ್ವರಿ ಶೆಟ್ಟಿ ಹಾಗೂ ಜು.7 ರಂದು ನವನೀತ್ ಶೆಟ್ಟಿ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಮೂರು ವಾರಗಳ ಬಳಿಕ ಅರ್ಜಿಯ ವಿಚಾರಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಐದು ವರ್ಷಗಳ ಹಿಂದೆ ನಡೆದಿದ್ದ ಉಡುಪಿಯ ಇಂದ್ರಾಳಿಯ ಎನ್‌ಆರ್‌ಐ ಉದ್ಯಮಿ ಭಾಸ್ಕರ್ ಶೆಟ್ಟಿ (52) ಹತ್ಯೆ ಪ್ರಕರಣದಲ್ಲಿ ಅಪರಾಧಿಗಳಾಗಿದ್ದ ಮೃತರ ಪತ್ನಿ ರಾಜೇಶ್ವರಿ ಮತ್ತು ಮಗ ನವನೀತ್ ಶೆಟ್ಟಿ ಹಾಗೂ ಜೋತಿಷಿ ನಿರಂಜನ್ ಭಟ್ ಸೇರಿದಂತೆ ಮೂವರಿಗೆ ಉಡುಪಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೂನ್ 8ರಂದು ಮೂವರಿಗೂ ಜೀವಿತಾವಧಿ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು.
ಇದೇ ಪ್ರಕರಣದಲ್ಲಿ ಸಾಕ್ಷ್ಯಗಳನ್ನು ನಾಶಪಡಿಸಿದ ಆರೋಪ ಹೊತ್ತಿದ್ದ ರಾಘವೇಂದ್ರ ಭಟ್ ಅವರನ್ನು ನ್ಯಾಯಾಲಯ ಖುಲಾಸೆ ಮಾಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…