ಉಡುಪಿ ಭಾಸ್ಕರ್ ಶೆಟ್ಟಿ ಹತ್ಯೆ ಆರೋಪಿಗಳ ಮೇಲೆ ದಾಳಿ ಪ್ರಕರಣ : 14 ಮಂದಿ ದೋಷಿ ; ಸೆ.16ರಂದು ಶಿಕ್ಷೆ ಪ್ರಕಟ – vishwanews24
ಉಡುಪಿ ಭಾಸ್ಕರ್ ಶೆಟ್ಟಿ ಹತ್ಯೆ ಆರೋಪಿಗಳ ಮೇಲೆ ದಾಳಿ ಪ್ರಕರಣ
14 ಮಂದಿ ದೋಷಿ ; ಸೆ.16ರಂದು ಶಿಕ್ಷೆ ಪ್ರಕಟ..
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನಡೆದಿದ್ದ ದಾಳಿ
ಮಂಗಳೂರು: ಉಡುಪಿ ಇಂದ್ರಾಳಿಯ ಉದ್ಯಮಿ ಭಾಸ್ಕರ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪುತ್ರ ನವನೀತ್ ಶೆಟ್ಟಿ ಮತ್ತು ಜ್ಯೋತಿಷಿ ನಿರಂಜನ್ ಭಟ್ ಮೇಲೆ ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಸಹ ಕೈದಿಗಳು ಹಲ್ಲೆ ಮಾಡಿ, ಕೊಲೆ ಯತ್ನ ನಡೆಸಿದ ಪ್ರಕರಣದಲ್ಲಿ 14 ಮಂದಿ ದೋಷಿಗಳೆಂದು ಮಂಗಳೂರು ನ್ಯಾಯಾಲಯದಲ್ಲಿ ಸಾಬೀತಾಗಿದೆ.
2017ರ ಸೆ.11ರಂದು ಮಧ್ಯಾಹ್ನ ಜೈಲಿನ ವರಾಂಡದಲ್ಲಿ ಆಗ ವಿಚಾರಣಾಧೀನ ಕೈದಿಗಳಾಗಿದ್ದ ನವನೀತ್ ಶೆಟ್ಟಿ ಮತ್ತು ನಿರಂಜನ ಭಟ್ ಮೇಲೆ ಸಹ ಕೈದಿಗಳು ಹಲ್ಲೆ ನಡೆಸಿದ್ದರು. ಘಟನೆಯಲ್ಲಿ ಹೋಮ್ ಗಾರ್ಡ್ ಆಗಿದ್ದ ರೇವತಿ ಅವರಿಗೂ ಗಾಯಗಳಾಗಿತ್ತು.
ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಇದೀಗ 14 ಮಂದಿ ದೋಷಿಗಳೆಂದು ಸಾಬೀತಾಗಿದ್ದು, ಸೆ.16ರಂದು ಶಿಕ್ಷೆ ಪ್ರಮಾಣ ಪ್ರಕಟವಾಗಲಿದೆ. ಈ ಪೈಕಿ ಮೂವರು ಇತರ ಪ್ರಕರಣಗಳಲ್ಲಿ ಆರೋಪಿಗಳಾಗಿ ಜೈಲಿನಲ್ಲಿದ್ದು, 10 ಮಂದಿಯನ್ನು ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಓರ್ವ ನ್ಯಾಯಾಲಯಕ್ಕೆ ಗೈರಾಗಿದ್ದಾನೆ.
