Judge and gavel in courtroom
ಮಂಗಳೂರು: ಉಡುಪಿ ಇಂದ್ರಾಳಿಯ ಉದ್ಯಮಿ ಭಾಸ್ಕರ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪುತ್ರ ನವನೀತ್ ಶೆಟ್ಟಿ ಮತ್ತು ಜ್ಯೋತಿಷಿ ನಿರಂಜನ್ ಭಟ್ ಮೇಲೆ ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಸಹ ಕೈದಿಗಳು ಹಲ್ಲೆ ಮಾಡಿ, ಕೊಲೆ ಯತ್ನ ನಡೆಸಿದ ಪ್ರಕರಣದಲ್ಲಿ 14 ಮಂದಿ ದೋಷಿಗಳೆಂದು ಮಂಗಳೂರು ನ್ಯಾಯಾಲಯದಲ್ಲಿ ಸಾಬೀತಾಗಿದೆ.
2017ರ ಸೆ.11ರಂದು ಮಧ್ಯಾಹ್ನ ಜೈಲಿನ ವರಾಂಡದಲ್ಲಿ ಆಗ ವಿಚಾರಣಾಧೀನ ಕೈದಿಗಳಾಗಿದ್ದ ನವನೀತ್ ಶೆಟ್ಟಿ ಮತ್ತು ನಿರಂಜನ ಭಟ್ ಮೇಲೆ ಸಹ ಕೈದಿಗಳು ಹಲ್ಲೆ ನಡೆಸಿದ್ದರು. ಘಟನೆಯಲ್ಲಿ ಹೋಮ್ ಗಾರ್ಡ್ ಆಗಿದ್ದ ರೇವತಿ ಅವರಿಗೂ ಗಾಯಗಳಾಗಿತ್ತು.
ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಇದೀಗ 14 ಮಂದಿ ದೋಷಿಗಳೆಂದು ಸಾಬೀತಾಗಿದ್ದು, ಸೆ.16ರಂದು ಶಿಕ್ಷೆ ಪ್ರಮಾಣ ಪ್ರಕಟವಾಗಲಿದೆ. ಈ ಪೈಕಿ ಮೂವರು ಇತರ ಪ್ರಕರಣಗಳಲ್ಲಿ ಆರೋಪಿಗಳಾಗಿ ಜೈಲಿನಲ್ಲಿದ್ದು, 10 ಮಂದಿಯನ್ನು ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಓರ್ವ ನ್ಯಾಯಾಲಯಕ್ಕೆ ಗೈರಾಗಿದ್ದಾನೆ.
ಕಟಪಾಡಿ ಅಂಡರ್‌ಪಾಸ್ ಬಳಿ ಮೀನಿನ ಲಾರಿ ಪಲ್ಟಿ ಉಡುಪಿ: ಮೀನಿನ ಲಾರಿಯೊಂದು ಪಲ್ಟಿಯಾದ ಘಟನೆ ಕಟಪಾಡಿ ಅಂಡರ್ ಪಾಸ್ ಪ್ರದೇಶದಲ್ಲಿ…
ಉಡುಪಿ ಕೃಷ್ಣ ಮಠ: ಪಂಚಮುಖಿ ಹನುಮಂತನ ವಿಗ್ರಹ ಸ್ಥಳಾಂತರ ಉಡುಪಿ: ಶ್ರೀ ಕೃಷ್ಣ ಮಠದ ಪರಿಸರದಲ್ಲಿ ಜನಸಂಚಾರಕ್ಕೆ ಅಡಚಣೆಯಾಗುತ್ತಿದ್ದ ಪಂಚಮುಖಿ…
ಉಡುಪಿ: ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಸ್ಫೋಟಕ ಬಳಸಿ ಬಂಡೆ ಸ್ಫೋಟ; ಇಬ್ಬರ ಬಂಧನ ಉಡುಪಿ: ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಸ್ಫೋಟಕ…
ಸಾಮಾಜಿಕ ಜಾಲ ತಾಣಗಳಲ್ಲಿ ಟ್ರೆಂಡ್ ಸೃಷ್ಟಿಸುತ್ತಿರುವ 80ರ ದಶಕದ ಫೋಟೋಗಳು: ಸಾರ್ವಜನಿಕರಿಗೆ ಪೊಲೀಸರಿಂದ ಎಚ್ಚರಿಕೆ ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್…
ಬಿಜೆಪಿ ಕಾಂಗ್ರೆಸ್ ಪಾರ್ಟಿನ ಟ್ರ್ಯಾಪ್ ಮಾಡೋದಕ್ಕೆ ತಯಾರಿ ಮಾಡ್ತಿದ್ದಾರೆ .. ಬಿಜೆಪಿಯವರ ಮೇಲೆಲ್ಲೂ ಕೂಡ ED ದಾಳಿ ಮಾಡುತ್ತಿಲ್ಲ ವಂದೇ ಮಾತರಂ…
ಮಹಾರಾಷ್ಟ್ರ : ಟ್ರಕ್ ಮತ್ತು ಪಿಕಪ್ ನಡುವೆ ಭೀಕರ ಅಪಘಾತ ; ಮೂವರು ಮಕ್ಕಳು ಸೇರಿ 8 ಮಂದಿ ದುರ್ಮರಣ…