Featured

ಉಡುಪಿ: ಭೂಮಾಲೀಕರ ಜಮೀನಿನ ಪಹಣಿಗೆ ಆಧಾರ್ ಲಿಂಕ್ ಕಡ್ಡಾಯ – vishwanews24

ಉಡುಪಿ: ಭೂಮಾಲೀಕರ ಜಮೀನಿನ ಪಹಣಿಗೆ ಆಧಾರ್ ಲಿಂಕ್ ಕಡ್ಡಾಯ

 ಉಡುಪಿ: ರೈತರು ತಮ್ಮ ಜಮೀನಿನ ಪಹಣಿಯನ್ನು ಆಧಾರ್‌ಗೆ ಲಿಂಕ್ ಮಾಡುವ ಕಾರ್ಯವು ಪ್ರಗತಿಯಲ್ಲಿದ್ದು, ಜಿಲ್ಲೆಯಲ್ಲಿ ಈವರೆಗೆ ಶೇ. 85 ರಷ್ಟು ಮಾತ್ರ ಪ್ರಗತಿ ಆಗಿರುತ್ತದೆ. ಮುಂದಿನ ಒಂದು ವಾರದೊಳಗೆ ಜಿಲ್ಲೆಯಲ್ಲಿ ಬಾಕಿ ಇರುವ ಭೂಮಾಲೀಕರ ಜಮೀನಿನ ಪಹಣಿಯನ್ನು ಆಧಾರ್‌ಗೆ ಲಿಂಕ್ ಮಾಡುವ ಬಗ್ಗೆ ಸರ್ಕಾರದಿಂದ ನಿರ್ದೇಶನ ನೀಡಲಾಗಿದ್ದು, ಆದರೆ, ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಗತಿ ಆಗಿರುವುದಿಲ್ಲ. 

 ರೈತರಿಗೆ ನಿಗದಿತ ಸಮಯದಲ್ಲಿ ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹಾಗೂ ಅಕ್ರಮ ಖಾತಾ ಬದಲಾವಣೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಆಧಾರ್ ಜೋಡಣೆಯು ಅವಶ್ಯಕವಾಗಿದ್ದು, ಜಿಲ್ಲೆಯ ರೈತರು ಮೂರು ದಿನದೊಳಗಾಗಿ ಪಹಣಿ ಆಧಾರ್ ದಾಖಲಾತಿಗಳೊಂದಿಗೆ ಹಾಗೂ ಆಧಾರ್ ಜೋಡಣೆಯಾಗಿರುವ ಮೊಬೈಲ್ ನೊಂದಿಗೆ ಸಂಬ0ಧಪಟ್ಟ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಬಹುದಾಗಿದೆ.

ಜಿಲ್ಲೆಯಲ್ಲಿ ಜಮೀನು ಹೊಂದಿ ಬೇರೆ ರಾಜ್ಯ ಹಾಗೂ ವಿದೇಶದಲ್ಲಿ ವಾಸವಿದ್ದ ಭೂಮಾಲೀಕರು ಸ್ವಗ್ರಾಮಕ್ಕೆ ಬಂದ ಕೂಡಲೇ ಅಥವಾ ಅವರ ಕುಟುಂಬಸ್ಥರು/ಸ0ಬ0ಧಿಕರು ಜಿಲ್ಲೆಯಲ್ಲಿದ್ದಲ್ಲಿ ಕೂಡಲೇ ಸಂಬ0ಧಪಟ್ಟ ಗ್ರಾಮ ಆಡಳಿತ ಅಧಿಕಾರಿಗಳನ್ನು ಸಂಪರ್ಕಿಸಿ ಪಹಣಿಗೆ ಆಧಾರ್ ಜೋಡಣೆ ಮಾಡಿಸಬೇಕು. ಸದ್ರಿ ಕಾರ್ಯವು ಗ್ರಾಮ ಆಡಳಿತ ಅಧಿಕಾರಿಗಳ ಮುಖಾಂತರವೇ ಆಗುತ್ತಿದ್ದು ಸೈಬರ್, ಗ್ರಾಮ ಒನ್ ಸೆಂಟರ್ ಇತ್ಯಾದಿ ಕಡೆಗಳಲ್ಲಿ ಮಾಡಲು ಅವಕಾಶ ಇರುವುದಿಲ್ಲ. 

 ಆದ್ದರಿಂದ, ಈವರೆಗೆ ಆಧಾರ್ ಜೋಡಣೆ ಮಾಡದೇ ಇರುವ ಭೂಮಾಲೀಕರು ಮುಂದಿನ ದಿನಗಳಲ್ಲಿ ಸರ್ಕಾರದ ಸವಲತ್ತುಗಳಿಂದ ವಂಚಿತರಾಗುವ ಸಂಭವ ಇರುವುದರಿಂದ ಆಧಾರ್ ಜೋಡಣೆ ಮಾಡದೇ ಇರುವ ಭೂಮಾಲೀಕರು ತಕ್ಷಣವೇ ಗ್ರಾಮ ಆಡಳಿತ ಅಧಿಕಾರಿಗಳನ್ನು ಸಂಪರ್ಕಿಸಿ ಪಹಣಿಗೆ ಆಧಾರ್ ಜೋಡಣೆ ಮಾಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago