ಉಡುಪಿ: ರೈತರು ತಮ್ಮ ಜಮೀನಿನ ಪಹಣಿಯನ್ನು ಆಧಾರ್ಗೆ ಲಿಂಕ್ ಮಾಡುವ ಕಾರ್ಯವು ಪ್ರಗತಿಯಲ್ಲಿದ್ದು, ಜಿಲ್ಲೆಯಲ್ಲಿ ಈವರೆಗೆ ಶೇ. 85 ರಷ್ಟು ಮಾತ್ರ ಪ್ರಗತಿ ಆಗಿರುತ್ತದೆ. ಮುಂದಿನ ಒಂದು ವಾರದೊಳಗೆ ಜಿಲ್ಲೆಯಲ್ಲಿ ಬಾಕಿ ಇರುವ ಭೂಮಾಲೀಕರ ಜಮೀನಿನ ಪಹಣಿಯನ್ನು ಆಧಾರ್ಗೆ ಲಿಂಕ್ ಮಾಡುವ ಬಗ್ಗೆ ಸರ್ಕಾರದಿಂದ ನಿರ್ದೇಶನ ನೀಡಲಾಗಿದ್ದು, ಆದರೆ, ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಗತಿ ಆಗಿರುವುದಿಲ್ಲ.
ರೈತರಿಗೆ ನಿಗದಿತ ಸಮಯದಲ್ಲಿ ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹಾಗೂ ಅಕ್ರಮ ಖಾತಾ ಬದಲಾವಣೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಆಧಾರ್ ಜೋಡಣೆಯು ಅವಶ್ಯಕವಾಗಿದ್ದು, ಜಿಲ್ಲೆಯ ರೈತರು ಮೂರು ದಿನದೊಳಗಾಗಿ ಪಹಣಿ ಆಧಾರ್ ದಾಖಲಾತಿಗಳೊಂದಿಗೆ ಹಾಗೂ ಆಧಾರ್ ಜೋಡಣೆಯಾಗಿರುವ ಮೊಬೈಲ್ ನೊಂದಿಗೆ ಸಂಬ0ಧಪಟ್ಟ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಬಹುದಾಗಿದೆ.
ಜಿಲ್ಲೆಯಲ್ಲಿ ಜಮೀನು ಹೊಂದಿ ಬೇರೆ ರಾಜ್ಯ ಹಾಗೂ ವಿದೇಶದಲ್ಲಿ ವಾಸವಿದ್ದ ಭೂಮಾಲೀಕರು ಸ್ವಗ್ರಾಮಕ್ಕೆ ಬಂದ ಕೂಡಲೇ ಅಥವಾ ಅವರ ಕುಟುಂಬಸ್ಥರು/ಸ0ಬ0ಧಿಕರು ಜಿಲ್ಲೆಯಲ್ಲಿದ್ದಲ್ಲಿ ಕೂಡಲೇ ಸಂಬ0ಧಪಟ್ಟ ಗ್ರಾಮ ಆಡಳಿತ ಅಧಿಕಾರಿಗಳನ್ನು ಸಂಪರ್ಕಿಸಿ ಪಹಣಿಗೆ ಆಧಾರ್ ಜೋಡಣೆ ಮಾಡಿಸಬೇಕು. ಸದ್ರಿ ಕಾರ್ಯವು ಗ್ರಾಮ ಆಡಳಿತ ಅಧಿಕಾರಿಗಳ ಮುಖಾಂತರವೇ ಆಗುತ್ತಿದ್ದು ಸೈಬರ್, ಗ್ರಾಮ ಒನ್ ಸೆಂಟರ್ ಇತ್ಯಾದಿ ಕಡೆಗಳಲ್ಲಿ ಮಾಡಲು ಅವಕಾಶ ಇರುವುದಿಲ್ಲ.
ಆದ್ದರಿಂದ, ಈವರೆಗೆ ಆಧಾರ್ ಜೋಡಣೆ ಮಾಡದೇ ಇರುವ ಭೂಮಾಲೀಕರು ಮುಂದಿನ ದಿನಗಳಲ್ಲಿ ಸರ್ಕಾರದ ಸವಲತ್ತುಗಳಿಂದ ವಂಚಿತರಾಗುವ ಸಂಭವ ಇರುವುದರಿಂದ ಆಧಾರ್ ಜೋಡಣೆ ಮಾಡದೇ ಇರುವ ಭೂಮಾಲೀಕರು ತಕ್ಷಣವೇ ಗ್ರಾಮ ಆಡಳಿತ ಅಧಿಕಾರಿಗಳನ್ನು ಸಂಪರ್ಕಿಸಿ ಪಹಣಿಗೆ ಆಧಾರ್ ಜೋಡಣೆ ಮಾಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…