ಉಡುಪಿ: ರಾಜ್ಯ ಸರಕಾರ ಈಗಾಗಲೇ ತಿದ್ದುಪಡಿ ತಂದಿರುವ ಭೂ ಸುಧಾರಣಾ, ಎಪಿ ಎಂ ಸಿ ತಿದ್ದುಪಡಿ ಕಾಯ್ದೆಗಳ ವಿರುದ್ದ ಉಡುಪಿ ಜಿಲ್ಲಾ ಜೆಡಿಎಸ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಅವರು ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆಗಳು ರೈತರಿಗೆ ಮಾರಕ. ಸಣ್ಣ, ಮಧ್ಯಮ ವರ್ಗದ ರೈತರಿಗೆ ಅನ್ಯಾಯವಾಗುತ್ತಿದೆ. ಕೈಗಾರಿಕೆ ಕಾಯ್ದೆಯೂ ಅತ್ಯಂತ ಅಪಾಯಕಾರಿ. ಜಮೀನು ಪಡೆದು ಮುಂದೆ ಮಾರಾಟ ಮಾಡಬಹುದು. ಈ ಕಾಯ್ದೆಯಿಂದ ಅನಾನುಕೂಲವೇ ಹೆಚ್ಚು ಎಂದರು.
ಸರ್ಕಾರ ತಂದಿರುವ ಮೂರು ಕಾಯ್ದೆಗಳಿಗೆ ನಮ್ಮ ಸಮ್ಮತಿ ಇಲ್ಲ. ಈ ಕಾಯಿದೆಗಳನ್ನು ಸುಗ್ರಿವಾಜ್ಞೆ ಮೂಲಕ ಅನುಷ್ಠಾನಕ್ಕೆ ತಂದಿದ್ದಾರೆ. ಇದನ್ನ ನಾವು ವಿರೋಧಿಸುತ್ತೇವೆ.
ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆಗಳು ರೈತರಿಗೆ ಮಾರಕವಾಗಿದೆ , ಸಣ್ಣ , ಮಧ್ಯಮ ವರ್ಗದ ರೈತರಿಗೆ ಇದರಿಂದ ಅನ್ಯಾಯವಾಗುತ್ತದೆ. ಕೈಗಾರಿಕೆ ಕಾಯ್ದೆಯೂ ಅತ್ಯಂತ ಅಪಾಯಕಾರಿ. ಜಮೀನು ಪಡೆದು ಮುಂದೆ ಮಾರಾಟ ಮಾಡಬಹುದು. ಈ ಕಾಯ್ದೆಯಿಂದ ಜನತೆಗೆ ಅನಾನುಕೂಲವೇ ಹೆಚ್ಚು ಎಂದು ಹೇಳಿದರು.
ಬಳಿಕ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳು ಮತ್ತು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಮನವಿಯನ್ನು ಸ್ವೀಕರಿಸಿದರು.
ಪ್ರತಿಭಟನೆಯಲ್ಲಿ ಜೆ ಡಿಎಸ್ ನಾಯಕರಾದ ಶ್ರೀಕಾಂತ್ ಅಡಿಗ, ಜಯರಾಮ ಆಚಾರ್ಯ, ಜಯಕುಮಾರ್ ಪರ್ಕಳ , ಬಿ.ಟಿ ಮಂಜುನಾಥ, ರಂಜಿತ್ ಬೈಂದೂರು, ಕಿಶೋರ್ ಕುಂದಾಪುರ, ರಾಜು ದೇವಾಡಿಗ , ಪ್ರಕಾಶ್ ಶೆಟ್ಟಿ ಬೆಳ್ಳಂಪಳ್ಳಿ , ರವಿರಾಜ್ ಸಾಲಿಯಾನ್, ಶ್ರೀಕಾಂತ್ ಹೆಬ್ರಿ, ಎಸ್ ಪಿ ಬರ್ಬೋಜಾ, ಅಬ್ದುಲ್ ಹಮೀದ್ ಯೂಸೂಫ್, ರಮೇಶ್ ಕುಂದಾಪುರ, ಮಾರುತಿ ಮೊಗೇರ, ಶಂಶುದ್ದೀನ್ ಮಜೂರು, ವಾಲ್ಟರ್ ಬಾರ್ಕೂರು , ರಶೀದ್ ಯು.ಎ, ಪ್ರಶಾಂತ್ ಭಂಡಾರಿ, ಪ್ರಶಾಂತ್ ಸಾಲಿಯಾನ್, ಮಹಮ್ಮದ್ ಹ್ಯಾರಿಸ್, ಸನವರ, ಸಂಪತ್, ಮತ್ತು ಪಕ್ಷದ ಕಾರ್ಯಕರ್ತರು ಹಾಜರಿದ್ದರು..
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…