Featured

ಉಡುಪಿ : ಭ್ರಷ್ಠಾಚಾರ ನಿರ್ಮೂಲನೆಯಿಂದ ದೇಶದ ಆಭಿವೃಧ್ದಿ: ಲೋಕಾಯುಕ್ತ ಎಸ್.ಪಿ.ಕುಮಾರ ಸ್ವಾಮಿ -Vishwanews24

ಉಡುಪಿ : ಭ್ರಷ್ಠಾಚಾರ ನಿರ್ಮೂಲನೆಯಿಂದ ದೇಶದ ಆಭಿವೃಧ್ದಿ: ಲೋಕಾಯುಕ್ತ ಎಸ್.ಪಿ.ಕುಮಾರ ಸ್ವಾಮಿ -Vishwanews24

ಉಡುಪಿ : ದೇಶದ ಆರ್ಥಿಕ,ಸಾಮಾಜಿಕ ಸೇರಿದಂತೆ ಎಲ್ಲಾ ಅಭಿವೃದ್ದಿಗೆ ಭ್ರಷ್ಠಾಚಾರವು ಪ್ರಮುಖ ಅಡಚಣೆಯಾಗಿದ್ದು, ಇದರ ನಿರ್ಮೂಲನೆಯಿಂದ ದೇಶದ ಅಭಿವೃದ್ದಿ ಸಾಧ್ಯವಾಗಲಿದ್ದು, ಇದರ ನಿರ್ಮೂಲನೆಗೆ ಪ್ರತಿಯೊಬ್ಬರೂ ಒಗ್ಗಟ್ಟಾಗಿ ಶ್ರಮಿಸಬೇಕು ಎಂದು ಉಡುಪಿ ಮತ್ತು ದ.ಕನ್ನಡ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಕುಮಾರಸ್ವಾಮಿ ಎ ಹೇಳಿದರು.

ಅವರು ಇಂದು ಉಡುಪಿಯ ಅಬಕಾರಿ ಭವನದಲ್ಲಿ, ಜಾಗೃತ ಅರಿವು ಸಪ್ತಾಹದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸರ್ಕಾರಿ ಕಚೇರಿಗಳಲ್ಲಿ ,ಸಮಾಜದಲ್ಲಿ ಭ್ರಷ್ಠಾಚಾರ ಆಳವಾಗಿ ಬೇರೂರಿದ್ದು, ಕೆಟ್ಟ ಪಿಡುಗು ಆಗಿದೆ. ಇದನ್ನು ನಿರ್ಮೂಲನೆ ಮಾಡಲು ಎಲ್ಲಾ ನಾಗರೀಕರು,ಸರ್ಕಾರಿ ನೌಕರರು ಒಟ್ಟಾಗಿ ಕೆಲಸ ಮಾಡಬೇಕಿದೆ, ನೌಕರರು ಸಾರ್ವಜನಿಕರ ಕೆಲಸಗಳಲ್ಲಿ ಅನಗತ್ಯ ವಿಳಂಬಕ್ಕೆ ಆಸ್ಪದ ನೀಡದೇ , ಸಕಾಲದಲ್ಲಿ , ಪ್ರಾಮಾಣಿಕವಾಗಿ ಮಾಡಿಕೊಡಬೇಕು, ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ ಮುಂದಿನ ಪೀಳಿಗೆಗೆ ಸ್ಪೂರ್ತಿ ಮತ್ತು ಆದರ್ಶಪ್ರಾಯವಾಗಬೇಕು. ಭ್ರಷ್ಠಾಚಾರ ಪ್ರಕರಣಗಳಲ್ಲಿ ಸಿಲುಕಿದರೆ ಮಾನಸಿಕ ಮತ್ತು ದೈಹಿಕ ಖಿನ್ನತೆ ಅನುಭವಿಸಬೇಕಾಗುತ್ತದೆ. ಭ್ರಷ್ಠಾಚಾರ ಮುಕ್ತ ಸಮಾಜ ನಿರ್ಮಾಣ ಮಾಡಲು ಲೋಕಾಯುಕ್ತ ಸಂಸ್ಥೆಯೊAದಿಗೆ ಸಮಾಜದ ಎಲ್ಲರೂ ಕೈ ಜೋಡಿಸ ಬೇಕು ಎಂದರು.

ಕಾರ್ಯಕ್ರಮದಲ್ಲಿ ಭ್ರಷ್ಠಾಚಾರ ಮುಕ್ತ ಸಮಾಜ ನಿರ್ಮಾಣದ ಕುರಿತು ಪ್ರತಿಜ್ಞಾ ವಿಧಿಯನ್ನು ಭೋದಿಸಲಾಯಿತು.

ಉಡುಪಿ ಲೋಕಾಯುಕ್ತದ ಪೊಲೀಸ್ ಉಪಾಧೀಕ್ಷಕ ಜಗದೀಶ್ ಮಾತನಾಡಿ, ಎಲ್ಲಾ ಕಚೇರಿಗಳಲ್ಲಿ ಭ್ರಷ್ಠಾಚಾರ ಜಾಗೃತಿಯು ಒಂದು ದಿನಕ್ಕೆ ಮಾತ್ರ ಸೀಮಿತವಾಗದೇ , ವರ್ಷ ಪೂರ್ತಿ ಜಾಗೃತಿ ಮೂಡಬೇಕು, ನೌಕರರು ಸಾರ್ವಜನಿಕರಿಂದ ದೂರುಗಳು ಬಾರದಂತೆ ಪ್ರಾಮಾಣಿಕವಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು ಎಂದರು.

ಜಿಲ್ಲಾ ಅಬಕಾರಿ ಇಲಾಖೆಯ ಉಪ ಆಯುಕ್ತೆ ರೂಪಾ, ಉಡುಪಿ ಲೋಕಾಯುಕ್ತದ ಪೊಲೀಸ್ ನಿರೀಕ್ಷಕ ಜಯರಾಮ ಗೌಡ ಉಪಸ್ಥಿತರಿದ್ದರು. ಅಬಕಾರಿ ನಿರೀಕ್ಷಕಿ ಶುಭದಾ ಸಿ ನಾಯಕ್ ಸ್ವಾಗತಿಸಿದರು, ಉಪ ನಿರೀಕ್ಷಕ ಶಿವಶಂಕರ್ ನಿರೂಪಿಸಿ ,ವಂದಿಸಿದರು.

ಕಾರ್ಯಕ್ರಮದಲ್ಲಿ ಅಬಕಾರಿ ,ಅರಣ್ಯ, ಉಡುಪಿ ತಾ.ಪಂಚಾಯತ್ ಸೇರಿದಂತೆ ವಿವಿಧ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

17 minutes ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

36 minutes ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

42 minutes ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

57 minutes ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

1 hour ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

3 hours ago