ಪಡುಬಿದ್ರೆ, : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ ಮಂಗಳೂರಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಉಡುಪಿ ಕಡೆಯಿಂದ ಮಂಗಳೂರಿನತ್ತ ಬರುವ ಎಲ್ಲಾ ಘನ ವಾಹನಗಳ ಸಂಚಾರದಲ್ಲಿ ಮಾರ್ಪಾಟು ಮಾಡಲಾಗಿದೆ.
ಉಡುಪಿ ಕಡೆಯಿಂದ ಮಂಗಳೂರು ಕಡೆ ಸಂಚರಿಸುವ ಘನ ವಾಹನಗಳನ್ನು ಪಡುಬಿದ್ರೆಯಲ್ಲಿ ತಡೆಯುವ ಪೊಲೀಸರು ಕಾರ್ಕಳ-ಮೂಡುಬಿದಿರೆ ರಸ್ತೆಯ ಮೂಲಕ ಸಂಚರಿಸಲು ಅವಕಾಶ ಮಾಡಿಕೊಡುತ್ತಿದ್ದಾರೆ.
ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿ ಕೆಲವೊಂದು ವಾಹನಗಳ ಚಾಲಕರು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸುತ್ತಿರುವುದು ಕಂಡುಬರುತ್ತಿದೆ.
ಇದನ್ನೂ ಓದಿ: ಮುರುಘಾ ಶ್ರೀ ಪ್ರಕರಣ : ಮುರುಘಾ ಮಠದ ಹಾಸ್ಟೆಲ್ ವಾರ್ಡನ್ ರಶ್ಮಿ ಬಂಧನ – Vishwanews24
ಈ ರೀತಿ ಸುತ್ತು ಬಳಸಿ ಕೆಲವು ಘನ ವಾಹನ ಸವಾರರು ನಿರಾಕರಿಸಿದ್ದು, ಕಾರ್ಕಳ ರಸ್ತೆಯ ಇಕ್ಕೆಲಗಳಲ್ಲಿ ತಮ್ಮ ವಾಹನಗಳನ್ನು ನಿಲ್ಲಿಸಿದ್ದಾರೆ. ಸಂಜೆ ಮತ್ತೆ ವಾಹನ ಸಂಚಾರ ಯಥಾಸ್ಥಿತಿಗೆ ಬಂದ ಬಳಿಕ ರಾ.ಹೆ.66ರಲ್ಲಿ ಸಂಚಾರ ನಡೆಸುವುದಾಗಿ ಹೇಳುತ್ತಿದ್ದಾರೆ.
ಪಡುಬಿದ್ರೆ ಪಿಎಸ್ಸೈ ಪ್ರಕಾಶ್, ಸಾಲ್ಯಾನ್ ದಿವಾಕರ್, ಹರೀಶ್, ರಾಜೇಶ್, ಹೈವೇ ಪೆಟ್ರೋಲ್ ಮತ್ತು ಗೃಹರಕ್ಷಕ ಸಿಬ್ಬಂದಿ ಹೆದ್ದಾರಿಯಲ್ಲಿ ಬಂದೋಬಸ್ತ್ ಮಾಡುತ್ತಿದ್ದಾರೆ. ಇದನ್ನೂ ಓದಿ: ಮಂಗಳೂರು : ಮೋದಿ ಸಮಾವೇಶಕ್ಕೆ ಗೋಲ್ಡ್ ಫಿಂಚ್ ಮೈದಾನಕ್ಕೆ ಆಗಮಿಸುತ್ತಿರುವ ಜನಸಾಗರ – Vishwanews24
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…