Featured

ಉಡುಪಿ: ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ – Vishwanews24

ಉಡುಪಿ: ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ಉಡುಪಿ: ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಯವರ ವಾಹನ ಚಾಲಕ ಇಂದು (ಬುಧವಾರ, ಜ.25) ನಸುಕಿನ ವೇಳೆ ಇಂದ್ರಾಳಿ ರೈಲ್ವೆ ಸೇತುವೆ ಸಮೀಪ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.

ಮೃತರನ್ನು ಹೆಬ್ರಿ ಸಳಂಜೆ ಗ್ರಾಮದ ಸಂಜೀವ ಹೆಗ್ಡೆ ಎಂಬವರ ಪುತ್ರ ರಾಘವೇಂದ್ರ ಹೆಗ್ಡೆ ಎಂದು ಗುರುತಿಸಲಾಗಿದೆ. ವೈಯಕ್ತಿಕ ಕಾರಣದಿಂದ ಮನ ನೊಂದ ಇವರು, ಮಂಗಳೂರು ಮನಪಾ ಮುಖ್ಯ ಲೆಕ್ಕಾಧಿಕಾರಿಗೆ ಸಂಬಂಧಿಸಿದ ಕಾರನ್ನು ಅಲ್ಲೇ ಸಮೀಪ ನಿಲ್ಲಿಸಿ, ಬಳಿಕ ಚಲಿಸುತ್ತಿದ್ದ ರೈಲಿನಡಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಮೃತದೇಹ ಸಂಪೂರ್ಣ ಛಿದ್ರಗೊಂಡಿದೆ.

ಸ್ಥಳದಲ್ಲಿ ಪತ್ತೆಯಾದ ಕಾರಿನ ಹಸಿರು ಫಲಕದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿ ಎಂಬ ಉಲ್ಲೇಖ ಹಾಗೂ ಮೃತರ ಕಿಸೆಯಲ್ಲಿ ಆಧಾರ್ ಕಾರ್ಡ್ ಆಧಾರದಲ್ಲಿ ವ್ಯಕ್ತಿಯ ಗುರುತು ಪತ್ತೆ ಹಚ್ಚಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಣಿಪಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಕಾನೂನು ಪ್ರಕ್ರಿಯೆ ನಡೆಸಿದ್ದು, ಸಮಾಜ ಸೇವಕ ನಿತ್ಯಾನಂದ ಒಳಕಾಡು ಮೃತದೇಹವನ್ನು ಸಾಗಿಸಲು ನೆರವಾದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

5 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

6 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

8 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

8 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

9 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

9 hours ago