ಉಡುಪಿ : ರಾಜ್ಯದ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಬೇಯಿಸಿದ ಮೊಟ್ಟೆ ಹಾಗೂ ಬಾಳೆಹಣ್ಣು ನೀಡಲು ಮುಂದಾಗಿರುವ ರಾಜ್ಯ ಸರ್ಕಾರ ಕ್ರಮವನ್ನು ಉಡುಪಿಯ ಶಾಸಕ ರಘುಪತಿ ಭಟ್ ಬೆಂಬಲಿಸಿದ್ದಾರೆ.
ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಮೊಟ್ಟೆ ಕೊಟ್ಟ ಕೂಡಲೇ ಮೊಟ್ಟೆಯನ್ನು ತಿನ್ನಲೇಬೇಕು ಎಂದೆನಿಲ್ಲ,ಕೊಟ್ಟರೆ ತಪ್ಪು ಎಂದು ನನಗೆ ಅನಿಸುವುದಿಲ್ಲ. ಸಣ್ಣ ಪ್ರಾಯಾದಲ್ಲಿ ಮಕ್ಕಳು ಸಸ್ಯಹಾರಿ ಇದ್ದರೆ ಸಸ್ಯಹಾರಿಯಾಗಿಯೇ ಇರುತ್ತಾರೆ. ಆದರೆ ಬೆಳೆದು ದೊಡ್ಡವರಾದ ಮೇಲೆ ಅವರು ಬದಲಾಗುವುದು ಉಂಟು . ಮೊಟ್ಟೆಯನ್ನು ಮಕ್ಕಳಿಗೆ ವಿತರಿಸುವ ಸಂದರ್ಭದಲ್ಲಿ ಪ್ರತ್ಯೇಕವಾಗಿ ಕೊಡುವ ವ್ಯವಸ್ಥೆ ಮಾಡಬಹುದು.ಕೆಲವೊಮ್ಮೆ ಸಸ್ಯಹಾರಿ ಮಕ್ಕಳಿಗೆ ಮೊಟ್ಟೆ ತಿನ್ನುವುದನ್ನು ನೋಡುವಾಗ ಬೇರೆ ತೆರನಾದ ಭಾವನೆಗಳು ಬರಬಹುದು. ಹೀಗಾಗಿ ಇದಕ್ಕೆ ಶಾಲೆಯಲ್ಲಿ ಪ್ರತ್ಯೇಕ ವ್ಯವಸ್ಥೆಗಳನ್ನು ಮಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮಕ್ಕಳಿಗೆ ಮೊಟ್ಟೆ ಕೊಡದೇ ಇರುವುದು ಸೂಕ್ತವಾದ ನಿರ್ಧಾರವಲ್ಲ.ಇತರ ಮಕ್ಕಳು ಮೊಟ್ಟೆ ತಿನ್ನುವುದನ್ನು ನೋಡಿ ಮಕ್ಕಳು ಪ್ರಭಾವಿತರಾಗುವುದು ಇಲ್ಲ. ಹೀಗಾಗಿ ಮಕ್ಕಳಿಗೆ ಮೊಟ್ಟೆ ನೀಡುವುದು ಸೂಕ್ತ ಎಂದು ಸರ್ಕಾರದ ನಿರ್ಧಾರದ ಬಗ್ಗೆ ಶಾಸಕರು ಬೆಂಬಲ ವ್ಯಕ್ತಪಡಿಸಿದರು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…