Featured

ಉಡುಪಿ : ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಅನುಷ್ಟಾನ ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ : ಡಾ. ಆರ್. ಜಿ ಆನಂದ್ -Vishwanews24

ಉಡುಪಿ : ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಅನುಷ್ಟಾನ ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ : ಡಾ. ಆರ್. ಜಿ ಆನಂದ್ -Vishwanews24

ಉಡುಪಿ  (Vishwanews24): ಮಕ್ಕಳ ಹಕ್ಕುಗಳ ರಕ್ಷಣೆ ಮಾಡುವುದು ಸೇರಿದಂತೆ ಅನುಷ್ಟಾನ ಮಾಡುವುದು ಸಮಾಜದ ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ಆರ್. ಜಿ ಆನಂದ್ ಹೇಳಿದರು.

ಅವರು ಇಂದು ನಗರದ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ ಕುರಿತ ಬಾಗೀದಾರರ ಸಮಾಲೋಚನಾ ಸಭೆ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು ಮಕ್ಕಳ ರಕ್ಷಣೆ ಸೇರಿದಂತೆ ಅವರ ಕಲ್ಯಾಣಾಭಿವೃದ್ಧಿಗೆ ಸರ್ಕಾರ ಅನೇಕ ಯೋಜನೆಗಳು, ಕಾರ್ಯಕ್ರಮಗಳು, ಕಾನೂನುಗಳನ್ನು ಜಾರಿಗೆ ತಂದಿದೆ. ಇವುಗಳ ಪ್ರತಿಶತ ನೂರರಷ್ಟು ಜಾರಿಗೆ ತರುವುದರೊಂದಿಗೆ ಮಕ್ಕಳ
ಶ್ರೇಯಾಭಿವೃದ್ಧಿಗೆ ಎಲ್ಲರೂ ಶ್ರಮಿಸಬೇಕು ಎಂದರು.

ಮಕ್ಕಳ ಹಕ್ಕುಗಳ ಕಾರ್ಯಕ್ರಮ ಅನುಷ್ಠಾನಗೊಳಿಸುವಲ್ಲಿ ಉಡುಪಿ ಜಿಲ್ಲೆಯು ರಾಜ್ಯಕ್ಕೆ ಮಾದರಿಯಾಗಿದೆ ಎಂದ ಅವರು ಮಕ್ಕಳ ಸಹಾಯವಾಣಿಗೆ ಕರೆಗಳು ಬಂದಾಗ ಅವುಗಳನ್ನು ನೊಂದಣಿಮಾಡಿ ಕೊಳ್ಳುವುದರೊಂದಿಗೆ ಸಂಬ0ದಪಟ್ಟ ಪ್ರಾದಿಕಾರಕ್ಕೆ ಗಮನಕ್ಕೆ ತಂದು ಪರಿಹರಿಸಬೇಕೆಂದರು.
ಜಿಲ್ಲೆಯಲ್ಲಿ ಉದ್ಯೋಗ ಅರಸಿ ಬರುವ ವಲಸೆ ಕಾರ್ಮಿಕರ ಮಕ್ಕಳು ಮಲ್ಪೆ ಬಂದರುವಿನಲ್ಲಿ ಮೀನು ಆಯುವ ಕೆಲಸ ಮಾಡುತ್ತಿರುವ ಬಗ್ಗೆ ಕೇಳಿ ಬರುತ್ತಿದೆ. ಮಕ್ಕಳ ರಕ್ಷಣಾ ಘಟಕದ ಸದಸ್ಯರು ಸೇರಿದಂತೆ ಇತರೆ ಇಲಾಖೆಗಳ ಸಂಯೋಗದೊ0ದಿಗೆ ಆಗಿಂದಾಗೆ ಭೇಟಿ ನೀಡಿ ಪೂರ್ಣ ಪ್ರಮಾಣದಲ್ಲಿ ನಿಯಂತ್ರಿಸ ಬೇಕು ಎಂದರು.

ಸಮಾಜದಲ್ಲಿನ ಅನಿಷ್ಟ ಪದ್ಧತಿಗಳಲ್ಲಿ ಒಂದಾದ ಬಾಲಕಾರ್ಮಿಕ ಪದ್ಧತಿಯನ್ನು ಕೊನೆಗೋಳಿಸಬೇಕು ಜಿಲ್ಲೆಯಲ್ಲಿ 3 ಪ್ರಕರಣಗಳು ಆಗಿರುವುದು ಕಂಡು ಬಂದಿದೆ ಮುಂದಿನ ದಿನಗಳಲ್ಲಿ ಯಾವುದೇ ಮಕ್ಕಳು ಬಾಲ ಕಾರ್ಮಿಕರಾಗದಂತೆ ಎಚ್ಚರ ವಹಿಸಬೇಕು ಎಂದರು. ಇತ್ತೀಚಿನ ದಿನಗಳಲ್ಲಿ ಮಕ್ಕಳು ದುಶ್ಚಟಗಳಿಗೆ ಬಲಿಯಾಗುವುದರೊಂದಿಗೆ ವ್ಯಸನಿಗಳಾಗುತ್ತಿದ್ದಾರೆ. ಇವುಗಳಿಗೆ ಕಡಿವಾಣ ಹಾಕುವುದರೊಂದಿಗೆ ಅವರುಗಳಲ್ಲಿ ಉತ್ತಮ ಹವ್ಯಾಸಗಳನ್ನು ಬೆಳೆಸಲು ಶಿಕ್ಷಕರು ಹಾಗೂ ಪೋಷಕರು ಮುಂದಾಗಬೇಕು ಎಂದರು.

ಜಿಲ್ಲೆಯಲ್ಲಿ 28 ಮಕ್ಕಳ ಪಾಲನಾ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, ಇವುಗಳಲ್ಲಿ 434ಕ್ಕೂ ಹೆಚ್ಚು ಮಕ್ಕಳು ಆಶ್ರಯ ಪಡೆಯುತ್ತಿದ್ದಾರೆ. ಅವರಿಗೆ ಉತ್ತಮ ಆಹಾರ, ಮನೋರಂಜನೆ ಸೇರಿದಂತೆ ಶಿಕ್ಷಣವೂ ಒದಗಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್, ಅಪಾರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ, ಎ.ಎಸ್.ಪಿ ಕುಮಾರ್ ಚಂದ್ರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸುಧೀರ್ ಚಂದ್ರ ಸೂಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಆರ್ ಶೇಷಪ್ಪ ಹಾಗೂ ಮತ್ತಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

4 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

7 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

10 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

11 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

11 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

11 hours ago