Featured

ಉಡುಪಿ : ಮಕ್ಕಳ ಹಕ್ಕುಗಳ ರಕ್ಷಣೆ ಎಲ್ಲಾ  ಇಲಾಖೆಗಳ ಜವಾಬ್ದಾರಿ : ಡಾ.ಅಂತೋನಿ ಸಬಾಸ್ಟಿಯನ್ -Vishwanews24

ಉಡುಪಿ : ಮಕ್ಕಳ ಹಕ್ಕುಗಳ ರಕ್ಷಣೆ ಎಲ್ಲಾ  ಇಲಾಖೆಗಳ ಜವಾಬ್ದಾರಿ : ಡಾ.ಅಂತೋನಿ ಸಬಾಸ್ಟಿಯನ್ -Vishwanews24

ಉಡುಪಿ: ಯಾವುದೇ ರೀತಿಯ ತಾರತಮ್ಯವಿಲ್ಲದೇ ಮಕ್ಕಳನ್ನು ರಕ್ಷಿಸುವ ಮತ್ತು ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಸಂಬ0ಧಪಟ್ಟ ಎಲ್ಲಾ ಇಲಾಖೆಗಳ ಜವಾಬ್ದಾರಿಯಾಗಿದ್ದು, ಈ ಕುರಿತಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಕಾಯಿದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಡಾ.ಅಂತೋಣಿ ಸೆಬಾಸ್ಟಿಯನ್ ಹೇಳಿದರು.

ಅವರು ಮಂಗಳವಾರ, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ಪೋಕ್ಸೋ, ಆರ್,ಟಿ.ಐ ಹಾಗೂ ಬಾಲನ್ಯಾಯ ಕಾಯ್ದೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇದನ್ನೂ ಓದಿ : ಉಡುಪಿ : ಕುಡಿಯುವ ನೀರು ಸಮಸ್ಯೆ ಬಾರದಂತೆ ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ರಾಜ್ಯ ಮಕ್ಕಳ ರಕ್ಷಣಾ ಆಯೋಗವು ಮಕ್ಕಳ ರಕ್ಷಣೆಗೆ ಬದ್ದವಾಗಿದ್ದು, ಅವುಗಳ ಉಲ್ಲಂಘನೆಯಾದಲ್ಲಿ ನೇರವಾಗಿ ರಾಜ್ಯ ಹೈಕೋರ್ಟ್ಗೆ ಮಾಹಿತಿ ನೀಡಬೇಕಾಗಿರುವುದರಿಂದ,  ಸಂಬ0ಧಪಟ್ಟ ಎಲ್ಲಾ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ತಮಗೆ ನಿಗಧಿಪಡಿಸಿರುವ ಕರ್ತವ್ಯಗಳನ್ನು  ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಕಾಯಿದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ, ಮಕ್ಕಳ ಹಕ್ಕುಗಳನ್ನು ರಕ್ಷಿಸಬೇಕು ಎಂದು ಅಧ್ಯಕ್ಷರು ಹೇಳಿದರು.

ಉಡುಪಿ ಜಿಲ್ಲೆಯಲ್ಲಿನ ಬಾಲ ಕಾರ್ಮಿಕರ ಕುರಿತ ಸಮೀಕ್ಷೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಕಾರ್ಮಿಕ ಇಲಾಖೆಗೆ ಸೂಚಿಸಿದ ಅಧ್ಯಕ್ಷರು, ಶಾಲೆಗಳಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗದ0ತೆ ಎಲ್ಲಾ ಮುನ್ನೆಚ್ಚರಿಕೆ ಕೈಗೊಂಡು, ಮಕ್ಕಳಿಗೆ ಶೌಚಾಲಯ, ಪುಸ್ತಕ, ಸಮವಸ್ತç ಸೇರಿದಂತೆ ಸರ್ಕಾರದಿಂದ ನೀಡುವ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ, ಶಾಲೆಗಳಲ್ಲಿ ದೂರು ಪೆಟ್ಟಿಗೆ ಅಳವಡಿಸಿ,  ಶಾಲೆ ಬಿಟ್ಟ ಮಕ್ಕಳ ಬಗ್ಗೆ ಮಾಹಿತಿ ಸಂಗ್ರಹಿಸಿ, ಅವರು ಪುನ: ಶಾಲೆಗೆ ಮರಳುವಂತೆ ಮಾಡಿ, ಶಾಲೆಗಳಲ್ಲಿ ಚೈಲ್ಡ್ಲೈನ್ ಸಂಖ್ಯೆಯನ್ನು ಕಡ್ಡಾಯವಾಗಿ ಅಳವಡಿಸಿ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಗ್ರಾಮ ಪಂಚಾಯತ್‌ಗಳಲ್ಲಿ ಮಕ್ಕಳ ಗ್ರಾಮಸಭೆ ನಡೆಸಿರುವ ಕುರಿತು ಪರಿಶೀಲಿಸಿದ ಅಯೋಗದ ಸದಸ್ಯರು, ಮಕ್ಕಳ ಗ್ರಾಮಸಭೆಯಲ್ಲಿ ಸಲ್ಲಿಕೆಯಾಗುವ ದೂರುಗಳ ಕುರಿತು ಶೀಘ್ರದಲ್ಲಿ ಕ್ರಮ ಕೈಗೊಳ್ಳುವಂತೆ ಎಲ್ಲಾ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ : ಉಡುಪಿ : ಕೊರೊನಾ ಸುರಕ್ಷತಾ ನಿಯಮ ಪಾಲಿಸದಿದ್ದರೆ ದಂಡದ ಜೊತೆಗೆ ಪ್ರಕರಣ ದಾಖಲು : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಬಾಲನ್ಯಾಯ ಕಾಯ್ದೆಯಡಿ ನೊಂದಣಿಯಾಗಿರುವ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಅಗತ್ಯ  ಮೂಲಭೂತ ಸೌಕರ್ಯ ಇರುವ ಬಗ್ಗೆ ಮತ್ತು ಮಕ್ಕಳ ಸುರಕ್ಷತೆಗೆ ಅಳವಡಿಸಿರುವ ಸುರಕ್ಷತಾ ಕ್ರಮಗಳ ಕುರಿತು ಪರಿಶೀಲಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ ಅಧ್ಯಕ್ಷರು, ಮಕ್ಕಳ ಹಕ್ಕುಗಳ ರಕ್ಷಣೆ ಕುರಿತಂತೆ ನಿಯಮಿತವಾಗಿ ಸಭೆಗಳನ್ನು ನಡೆಸಿ, ಸಭೆಯ ವರದಿ ಮತ್ತು ನಿರ್ಣಯಗಳ ಕುರಿತು ಕೈಗೊಂಡ ಕ್ರಮಗಳ  ಬಗ್ಗೆ ಸಮಗ್ರ ವರದಿಯನ್ನು ಆಯೋಗಕ್ಕೆ ಸಲ್ಲಿಸಬೇಕು ಹಾಗೂ ಮಕ್ಕಳ ರಕ್ಷಣೆ ಕುರಿತು ಕಾರ್ಯನಿರ್ವಹಿಸುವ ಎಲ್ಲಾ ಅನುಷ್ಠಾನ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಯಾವುದೇ ಗೊಂದಲಕ್ಕೆ ಆಸ್ಪದ ನೀಡದಂತೆ ಸಮರ್ಪಕವಾದ ಅಂಕಿ-ಅ0ಶಗಳನ್ನು ಆಯೋಗಕ್ಕೆ ನೀಡುವಂತೆ ಅಧ್ಯಕ್ಷರು ಸೂಚಿಸಿದರು.

ಮಕ್ಕಳ ಮೇಲಿನ ಕಿರುಕುಳ ಪ್ರಕರಣಗಳಲ್ಲಿ ಶೀಘ್ರದಲ್ಲಿ ನ್ಯಾಯ ದೊರಕಿಸುವಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಬಾಲ್ಯ ವಿವಾಹ ಪ್ರಕರಣ ನಡೆಯದಂತೆ ಎಚ್ಚರವಹಿಸಬೇಕು. ದೌರ್ಜನ್ಯಕ್ಕೆ ಒಳಗಾದ ಮಕ್ಕಳಿಗೆ ಸೂಕ್ತ ವೈದ್ಯಕೀಯ ನೆರವು, ಪುರ್ನವಸತಿ ಹಾಗೂ ಪರಿಹಾರಗಳನ್ನು ಶೀಘ್ರದಲ್ಲಿ ವಿತರಿಸಬೇಕು. ಮಕ್ಕಳ ಹಕ್ಕುಗಳ ರಕ್ಷಣೆಗೆ ಕಾರ್ಯನಿರ್ವಹಿಸುತಿರುವ ಸ್ವಯಂಸೇವಾ ಸಂಸ್ಥೆಗಳಿಗೆ   ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಿ, ಹೆಚ್ಚಿನ ಅರಿವು ಮೂಡಿಸಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ  ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ, ರಾಜ್ಯ ಮಕ್ಕಳ ಆಯೋಗದ ಸದಸ್ಯ ಶಂಕರಪ್ಪ, ರಾಘವೇಂದ್ರ, ಪರಶುರಾಮ, ಭಾರತಿ, ಅಶೋಕ್ ಹಾಗೂ ಹಾಗೂ ವಿವಿಧ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಮಕ್ಕಳ ಹಕ್ಕು ರಕ್ಷಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಸ್ವಯಂ ಸೇವಾ ಸಂಘಟನೆಗಳ  ಪ್ರತಿನಿಧಿಗಳು ಉಪಸ್ಥಿತರಿದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ ಉಪನಿರ್ದೇಶಕ ಶೇಷಪ್ಪ ಸ್ವಾಗತಿಸಿದರು, ಶಿಶು ಅಭಿವೃದ್ದಿ ಯೋಜನಾಧಿಕಾರಿ ವೀಣಾ ವಂದಿಸಿದರು.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

13 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

13 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

13 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

13 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

14 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

16 hours ago