ಉಡುಪಿ,: ತೆಕ್ಕಟ್ಟೆ ಕೊಮೆಯಲ್ಲಿರುವ ತನ್ನ ಅಜ್ಜಿಯ ಮನೆಗೆ ಹೋಗುವುದಾಗಿ ತಿಳಿಸಿ, ಏಪ್ರಿಲ್ 5 ರಂದು ತನ್ನ 7 ವರ್ಷಧ ಮಗ ಭವಿಷ್ ಎಸ್ (7) ನೊಂದಿಗೆ ಹೋದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನ ನಿವಾಸಿ ಸ್ವಾತಿ (30) ಎಂಬ ಮಹಿಳೆಯು ಇದುವರೆಗೂ ಅಜ್ಜಿಯ ಮನೆಗೂ ಹೋಗದೇ ವಾಪಾಸು ಮನೆಗೂ ಬಾರದೇ ನಾಪತ್ತೆಯಾಗಿರುತ್ತಾರೆ.
ಸ್ವಾತಿ (30 ವರ್ಷ), 5 ಅಡಿ ಎತ್ತರ, ಸಾಧರಾಣ ಶರೀರ, ಎಣ್ಣೆಕಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಭವಿಷ್ ಎಸ್ (7 ವರ್ಷ) 2.5 ಅಡಿ ಎತ್ತರ, ಸಾಧಾರಣ ಶರೀರ, ಎಣ್ಣೆಕಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ.
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕರು ಮೊ.ನಂ: 9480805468, ಕುಂದಾಪುರ ವೃತ್ತ ಪೊಲೀಸ್ ನಿರೀಕ್ಷಕರು ಮೊ.ನಂ: 9480805433 ಅಥವಾ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…