Featured

ಉಡುಪಿ :ಮಗು ಅನಧಿಕೃತ ಮಾರಾಟ; ಮೂವರ ವಿರುದ್ಧ ಪ್ರಕರಣ ದಾಖಲು – vishwanews24

ಉಡುಪಿ :ಮಗು ಅನಧಿಕೃತ ಮಾರಾಟ; ತಂದೆ ತಾಯಿ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲು

ಉಡುಪಿ, : ಹೆಣ್ಣು ಮಗುವನ್ನು ಅಕ್ರಮವಾಗಿ ಮಾರಾಟ ಮಾಡಿದ ಆರೋಪದಲ್ಲಿ ತಂದೆ ತಾಯಿ ಸಹಿತ ಮೂವರ ವಿರುದ್ಧ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜು. 19ರಂದು ಆರೋಪಿಗಳಾದ ರಾಬಿಯಾ ಬಾನು ಮತ್ತು ಖಾಲಿದ್‌ ಸಯ್ಯದ್‌ ಅವರಿಗೆ ಹೆಣ್ಣು ಮಗು ಜನಿಸಿತ್ತು. ಆದರೆ ಆ ಮಗು ಅವರ ವಶದಲ್ಲಿ ಇಲ್ಲದಿರುವ ಬಗ್ಗೆ ಆ. 6ರಂದು ಪೆರಂಪಳ್ಳಿಯ ಅಂಗನವಾಡಿ ಕಾರ್ಯಕರ್ತೆ ಸರಿತಾ ಡಿ’ಸೋಜಾ ಅವರು ಮಕ್ಕಳ ರಕ್ಷಣ ಘಟಕಕ್ಕೆ ಮಾಹಿತಿ ನೀಡಿದ್ದರು.

ಅನಂತರ ಮಕ್ಕಳ ರಕ್ಷಣ ಘಟಕದ ಸಾಮಾಜಿಕ ಕಾರ್ಯಕರ್ತರಾದ ಸುರಕ್ಷಾ, ಯೋಗೀಶ್‌ ಹಾಗೂ ಸರಿತಾ ಡಿ’ಸೋಜಾ ಅವರು ಪೆರಂಪಳ್ಳಿಯ ಶೀಂಬ್ರ ಭಟ್ರಕೋಡಿಯಲ್ಲಿರುವ ಆರೋಪಿಗಳ ಮನೆಗೆ ಭೇಟಿ ನೀಡಿದ್ದು, ಈ ವೇಳೆ ಮನೆಗೆ ಬೀಗ ಹಾಕಲಾಗಿತ್ತು. ಖಾಲಿದ್‌ಗೆ ಕರೆ ಮಾಡಿದಾಗ ಸ್ವೀಕರಿಸಲಿಲ್ಲ. ಬಳಿಕ ಮೊಬೈಲ್‌ ಸ್ವಿಚ್‌ ಆಫ್ ಆಗಿತ್ತು. ಈ ಬಗ್ಗೆ ಸುರಕ್ಷಾ ಅವರು ಮಹಿಳಾ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಆ.7ರಂದು ಆರೋಪಿಗಳನ್ನು ಪೊಲೀಸರು ಪತ್ತೆಹಚ್ಚಿ ಠಾಣೆಗೆ ಕರೆತಂದಿದ್ದರು.

ವಿಚಾರಣೆ ವೇಳೆ ಆರೋಪಿಗಳು ಮಗುವನ್ನು ಮೂಲ್ಕಿಯ ನಿವಾಸಿ ವಾಜಿದ್‌ ಅವರಿಗೆ ಕಾನೂನು ಬಾಹಿರವಾಗಿ ನೀಡಿರುವುದಾಗಿ ತಿಳಿಸಿದ್ದರು. ಬಳಿಕ ಮಹಿಳಾ ಪೊಲೀಸ್‌ ಠಾಣೆಯ ಉಪನಿರೀಕ್ಷಕರು ವಾಜಿದ್‌ನ ಬಗ್ಗೆ ವಿಚಾರಣೆ ಮಾಡಿ ಆತನನ್ನು ಠಾಣೆಗೆ ಬರುವಂತೆ ತಿಳಿಸಿದ್ದರು. ಆತ ಮಗುವಿನೊಂದಿಗೆ ಬಂದಿದ್ದು, ಮಗುವಿನ ಮಾರಾಟದ ಬಗ್ಗೆ ಸತ್ಯಾಸತ್ಯತೆ ತಿಳಿಯದೇ ಇದ್ದುದರಿಂದ ಪ್ರಕರಣ ದಾಖಲಿಸಲು ಸಾಧ್ಯವಾಗಿರಲಿಲ್ಲ.

ಪ್ರಸ್ತುತ ಸುರಕ್ಷಾ ಅವರ ದೂರಿನಂತೆ ಉಡುಪಿ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಬಾಲ ನ್ಯಾಯ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ. ಪ್ರಸ್ತುತ ತಾಯಿ-ಮಗುವನ್ನು ಸುರಕ್ಷತೆಯ ದೃಷ್ಟಿಯಿಂದ ಉಡುಪಿಯ ಸಖೀ ಒನ್‌ ಸ್ಟಾಪ್‌ ಸೆಂಟರ್‌ಗೆ ದಾಖಲಿಸಲಾಗಿದೆ. ಪೊಲೀಸರು ಮತ್ತಷ್ಟು ತನಿಖೆ ನಡೆಸುತ್ತಿದ್ದಾರೆ.

 

Vishwa News 24

Recent Posts

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

1 hour ago

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

2 hours ago

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

2 hours ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

2 hours ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

2 hours ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

2 hours ago