Featured

ಕಾಪು: ಮಣಿಪುರ ಗ್ರಾಮದ ಮಹಿಳೆ ಕೊಲೆ : ಇಬ್ಬರು ಪೊಲೀಸರ ವಶಕ್ಕೆ – vishwanews24

ಕಾಪು : ಮಣಿಪುರ ಗ್ರಾಮದ ಮಹಿಳೆ ಕೊಲೆ : ಇಬ್ಬರು ಪೊಲೀಸರ ವಶಕ್ಕೆ

ಉಡುಪಿ: ತಾಲೂಕಿನ ಮಣಿಪುರ ಗ್ರಾಮದ ಅರಬಿ ಕೆನರಾಡಿ ಎಂಬಲ್ಲಿ ಮಹಿಳೆಯೊಬ್ಬರನ್ನು ಕಡಿದು ಕೊಲೆಗೈದ ಘಟನೆ ನಡೆದಿದೆ. ವನಜಾ ಪೂಜಾರ್ತಿ (60) ಕೊಲೆಯಾದ ಮಹಿಳೆ.

ಕೊಲೆ ಸಂಬಂಧ ಸ್ಥಳೀಯ ನಿವಾಸಿಗಳಾದ ವಲೇರಿಯನ್ ಮೆಂಡೋನ್ಸಾ ಮತ್ತು ಪುವೀಣ್ ಮೆಂಡೋನ್ಸಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಲೇರಿಯನ್ ಮೆಂಡೋನ್ಸಾ ಹಾಗೂ ಪುವೀಣ್ ಮೆಂಡೊನ್ಸಾ ಅವರು ಚಿಕ್ಕಪ್ಪ-ದೊಡ್ಡಪ್ಪನ ಮಕ್ಕಳಾಗಿದ್ದು, ವನಜಾ ಪೂಜಾರ್ತಿಯವರೊಂದಿಗೆ ಆಗಾಗ್ಗೆ ಇವರಿಬ್ಬರು ಮದ್ಯಪಾನ ಮಾಡುತ್ತಿದ್ದರು.

ಇದನ್ನೂ ಓದಿ:👇

ಮಾರ್ಚ್ 9 ರಂದು ಸಂಜೆ 5 ಗಂಟೆಯಿಂದ ಮಾರ್ಚ್ 10 ರಂದು ಬೆಳಿಗ್ಗೆ 7 ಗಂಟೆಯ ನಡುವಿನ ಅವಧಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳದ ಹಿನ್ನೆಲೆಯಲ್ಲಿ ವಲೇರಿಯನ್ ಮೆಂಡೊನ್ಸಾ ಮತ್ತು ಪುವೀಣ್ ಮೆಂಡೋನ್ಸಾ ಅವರು ವನಜಾ ಪೂಜಾರ್ತಿಯನ್ನು ಹರಿತವಾದ ಆಯುಧದಿಂದ ಹತ್ಯೆ ಮಾಡಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 33/2026 ಅಡಿಯಲ್ಲಿ ಕಲಂ 103 BNS ಪುಕಾರ ಪುಕರಣ ದಾಖಲಿಸಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ಕೆಎಂಸಿ ಮಣಿಪಾಲದ ಪೊರೆನ್ಸಿಕ್ ವೈದ್ಯರು, ಸೀನ್ ಆಫ್ ಕ್ರೈಂ ಆಫೀಸರ್ (SOCO) ತಂಡ, ಶ್ವಾನ ದಳ ಹಾಗೂ ಫಿಂಗರ್ ಪ್ರಿಂಟ್ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ:👇

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago