ಉಡುಪಿ: ಬಾಂಗ್ಲಾದೇಶದಲ್ಲಿ ರಾಜಕೀಯ ಅಸ್ಥಿರತೆಯಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಮುಸ್ಲಿಂ ಮತೀಯವಾದಿಗಳು ಬಾಂಗ್ಲಾದ ಅಲ್ಪ ಸಂಖ್ಯಾತ ಹಿಂದೂಗಳ ಮೇಲೆ ನಡೆಸುತ್ತಿರುವ ದೌರ್ಜನ್ಯವನ್ನು ರಾಷ್ಟ್ರೀಯವಾದಿ ಭಾರತೀಯರು ಒಕ್ಕೊರಲಿನಿಂದ ಖಂಡಿಸುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.
ಹಿಂದೂ ದೇವಸ್ಥಾನ, ಆರಾಧನಾ ಕೇಂದ್ರಗಳ ಮೇಲೆ ದಾಳಿ, ಹಿಂದೂ ಧರ್ಮೀಯರ ಮೇಲೆ ಮಾರಣಾಂತಿಕ ಹಲ್ಲೆ ನಡೆಸುತ್ತಾ ಹಿಂದೂ ವಿರೋಧಿ ನೀತಿ ನಡೆಸುತ್ತಿರುವ ಮತಾಂಧ ಶಕ್ತಿಗಳ ವಿರುದ್ಧ ಬಾಂಗ್ಲಾ ಸರಕಾರ ತಕ್ಷಣ ಕಠಿಣ ಕ್ರಮಕೈಗೊಂಡು ಹಿಂದೂಗಳ ರಕ್ಷಣೆಗೆ ಕಾರ್ಯಪುವೃತ್ತರಾಗಬೇಕು.
ಭಾರತದಲ್ಲಿ ಅಲ್ಪಸಂಖ್ಯಾತರ ಮೇಲೆ ಚಿಕ್ಕ ಘಟನೆ ನಡೆದ ಕೂಡಲೇ ಬೀದಿಗಿಳಿಯುವ ಎಡಪಂಥೀಯ, ಜಾತ್ಯತೀತ ಮುಖವಾಡ ತೊಟ್ಟ ಬುದ್ಧಿಜೀವಿಗಳು, ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯದ ಬಗ್ಗೆ ಚಕಾರ ಎತ್ತುತ್ತಿಲ್ಲ. ಹಿಂದೂಗಳ ಮೇಲಿನ ದಾಳಿಯ ಬಗ್ಗೆ ದಿವ್ಯ ಮೌನ ವಹಿಸುವ ಮೂಲಕ ಪ್ರಗತಿಪರರು ಐಸಿಸ್ ಮನಸ್ಥಿತಿಯ ಮತೀಯ ಶಕ್ತಿಗಳಿಗೆ ಪರೋಕ್ಷ ಬೆಂಬಲ ನೀಡುತ್ತಿದ್ದಾರೆ.
ಬಾಂಗ್ಲಾ ಹಿಂದೂಗಳ ರಕ್ಷಣೆಗೆ ಕೇಂದ್ರ ಸರ್ಕಾರ ಈಗಾಗಲೇ ಕಾರ್ಯ ಪುವೃತ್ತವಾಗಿದ್ದು, ಹಿಂದೂಗಳ ವಿರುದ್ಧ ದಾಳಿ ಮಾಡುತ್ತಿರುವ ಮತೀಯ ಶಕ್ತಿಗಳಿಗೆ ತಕ್ಕ ಉತ್ತರ ನೀಡಬೇಕಾದ ಅನಿವಾರ್ಯ ಸನ್ನಿವೇಶ ನಿರ್ಮಾಣವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…