Featured

ಉಡುಪಿ ಮತ್ತು ದ.ಕ ಜಿಲ್ಲೆಯಲ್ಲಿ 1400 ಕಿಂಡಿ ಅಣೆಕಟ್ಟು ನಿರ್ಮಾಣ : ಸಚಿವ ಮಾಧುಸ್ವಾಮಿ – Vishwanews24

ಉಡುಪಿ- ದ.ಕ ಜಿಲ್ಲೆಯಲ್ಲಿ 1400 ಕಿಂಡಿ ಅಣೆಕಟ್ಟು ನಿರ್ಮಾಣ: ಸಚಿವ ಮಾಧುಸ್ವಾಮಿ – Vishwanews24

ಉಡುಪಿ: ಉಡುಪಿ ಮತ್ತು ದ.ಕನ್ನಡ ಜಿಲ್ಲೆಗಳಲ್ಲಿ 1400 ಕಿಂಡಿ ಅಣೆಕಟ್ಟುಗಳನ್ನು ಗುರುತಿಸಲು ಸ್ಥಳಗಳನ್ನು ಗುರುತಿಸಲಾಗಿದ್ದು ಈ ವರ್ಷ ಇದಕ್ಕಾಗಿ 500 ಕೋಟಿ ರೂ ಗಳನ್ನು ಬಿಡುಗಡೆ ಮಾಡಿ ಕಾರ್ಯ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ರಾಜ್ಯದ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದರು.

ಹೆಬ್ರಿ ತಾಲೂಕಿನ ಶಿವಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 560 ಲಕ್ಷ ರೂ ವೆಚ್ಚದಲ್ಲಿ 4 ಕಿಂಡಿ ಅಣೆಕಟ್ಟುಗಳನ್ನು ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದರು.

ಉಡುಪಿ ಮತ್ತು ದ.ಕನ್ನಡ ಜಿಲ್ಲೆಗಳಲ್ಲಿ ಹರಿದು ಸಮುದ್ರ ಸೇರುವ ನೀರನ್ನು ತಡೆದು ಕೃಷಿ, ಕುಡಿಯುವ ನೀರಿನ ಉದ್ದೇಶಕ್ಕೆ ಬಳಸಲು ಅನುಕೂಲವಾಗುವಂತೆ ಪಶ್ಚಿಮ ವಾಹಿನಿ ಯೋಜನೆಯನ್ನು ಬಜೆಟ್ ನಲ್ಲಿ ಘೋಷಿಸಿದ್ದು , 1400 ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಲು ಸ್ಥಳ ಗುರುತಿಸಲಾಗಿದೆ. ಇದರಿಂದ ಈ ಭಾಗದಲ್ಲಿ ಅಂರ್ತಜಲ ವೃದ್ಧಿಯ ಜೊತೆಗೆ ,ಮಣ್ಣಿನ ಫಲವತ್ತತೆ ವೃಧ್ದಿ ಸಹ ಸಾಧ್ಯವಾಗಲಿದೆ ಎಂದು ಸಚಿವರು, ರಾಜ್ಯದಲ್ಲಿ ನೀರು ಹರಿಯುವ ಹಳ್ಳಗಳಲ್ಲಿ ಶೇಖರಣೆಯಾಗುವ ಹೊಳು ತೆಗೆಯಲೂ ಸಹ ಯೋಜನೆ ರೂಪಿಸಲಾಗುವುದು ಹೇಳಿದರು

ಈ ಭಾಗದ ಡ್ರೀಮ್ಡ್ ಅರಣ್ಯ ಸಮಸ್ಯೆಗೆ ಸಂಬ0ದಿಸಿದ0ತೆ ಈಗಾಗಲೇ ರಾಜ್ಯದಲ್ಲಿ 7.70 ಲಕ್ಷ ಹೆಕ್ಟೇರ್ ಭೂಮಿಯನ್ನು ಡ್ರೀಮ್ಡ್ ವ್ಯಾಪ್ತಿಯಿಂದ ಕೈಬಿಡುವಂತೆ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಲಾಗಿದೆ. ಈ ಭೂಮಿಯನ್ನು ಅರ್ಹ ಭೂ ರಹಿತರಿಗೆ ನೀಡಲಾಗುವುದು ಎಂದು ಸಚಿವರು, ಈಗಾಗಲೇ ಅರಣ್ಯ ವ್ಯಾಪ್ತಿಯಲ್ಲಿನ ಸಣ್ಣ ಹಿಡುವಳಿದಾರರು ಮತ್ತು ಮನೆ ಕಟ್ಟಿಕೊಂಡಿರುವವರು ಎದುರಿಸುತ್ತಿರುವ ಡ್ರೀಮ್ಡ್ ಅರಣ್ಯದ ಸಮಸ್ಯೆ ಶೀಘ್ರದಲ್ಲಿ ಬಗೆಹರಿಯಲಿದೆೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಮಾತನಾಡಿ, ಈ ಭಾಗದಲ್ಲಿ ಅಂರ್ತಜಲ ವೃಧ್ದಿಗೆ ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಲಾಗುತ್ತಿದ್ದು, 2018 ರಿಂದ 2023 ರ ಅವಧಿಯೊಳಗೆ 100 ಕಿಂಡಿ ಅಣೆಕಟ್ಟು ನಿರ್ಮಿಸುವ ಯೋಜನೆಯಿದೆ ಎಂದು ಅವರು, ಡ್ರೀಮ್ಡ್ ಫಾರೆಸ್ಟ್ ನಿಂದ ಈ ಭಾಗದಲ್ಲಿ ಅಭಿವೃದ್ದಿ ಕುಂಠಿತವಾಗಿದ್ದು, ಪ್ರಸ್ತುತ ಸರಕಾರ ಡ್ರೀಮ್ಡ್ ಫಾರೆಸ್ಟ್ ನಿಂದ ಭೂಮಿಯನ್ನು ಕೈಬಿಡುವ ಕುರಿತಂತೆ ಸುಪ್ರೀಂಕೋಟ್ ಗೆ ಅಫಿಡವಿಟ್ ಸಲ್ಲಿಸಿದ್ದು, ಈ ಬಗ್ಗೆ ಶೀಘ್ರದಲ್ಲಿ ಸರ್ಕಾರದ ಸುತ್ತೋಲೆ ಆಗಲಿದೆ, ಜನರ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ ಎಂದರು.

ಶಿವಪುರ ಗ್ರಾಮದ ದೇವಸ್ಥಾನಬೆಟ್ಟು ನಲ್ಲಿ 150 ಲಕ್ಷ ರೂ, ಪುತ್ತಿಬೆಟ್ಟು ನಲ್ಲಿ 150 ಲಕ್ಷ ರೂ , ಮುಕ್ಕಾಣಿ ಗೋನುಮಾರು ನಲ್ಲಿ 155 ಲಕ್ಷ ರೂ, ಕುಂಟೆಬೆಟ್ಟು ನಲ್ಲಿ 105 ಲಕ್ಷ ರೂ ಸೇರಿದಂತೆ ಒಟ್ಟು 560 ಲಕ್ಷ ರೂ ಗಳ ಕಿಂಡಿ ಆಣೆಕಟ್ಟು ಕಾಮಗಾರಿಗಳನ್ನು ಸಚಿವ ಮಾಧುಸ್ವಾಮಿ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಶಿವಪುರ ಗ್ರಾಮ ಪಂಚಾಯತ್ ಅಧ್ಯಕ್ಷ ಶೇಖರ್ ಶೆಟ್ಟಿ, ವರಂಗ ಗ್ರಾ.ಪಂ.ಅಧ್ಯಕ್ಷೆ ಉಷಾ ಹೆಬ್ಬಾರ್, ಸಣ್ಣ ನೀರಾವರಿ ಇಲಾಖೆ ಮುಖ್ಯ ಕಾರ್ಯದರ್ಶಿ ಮೃತ್ಯುಂಜಯ ಸ್ವಾಮಿ , ಮೆಸ್ಕಾಂ ನ ನಿರ್ದೇಶಕ ದಿನೇಶ್ ಪೈ ಮತ್ತಿತರರು ಉಪಸ್ಥಿತರಿದ್ದರು.

 

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago