Featured

ಉಡುಪಿ : ಮತ್ಸ್ಯಗಂಧ ಎಕ್ಸ್‌ಪ್ರೆಸ್‌ನ ಎಲ್‌ಎಚ್‌ಬಿ ಕೋಚ್‌ಗಳಲ್ಲಿ ದೋಷ ; ಕೂಡಲೇ ಸರಿಪಡಿಸುವಂತೆ ಸಚಿವ ಸೋಮಣ್ಣರಿಗೆ ಕೋಟ ಮನವಿ  – vishwanews24

ಉಡುಪಿ : ಮತ್ಸ್ಯಗಂಧ ಎಕ್ಸ್‌ಪ್ರೆಸ್‌ನ ಎಲ್‌ಎಚ್‌ಬಿ ಕೋಚ್‌ಗಳಲ್ಲಿ ದೋಷ – ಕೂಡಲೇ ಸರಿಪಡಿಸುವಂತೆ ಸಚಿವ ಸೋಮಣ್ಣರಿಗೆ ಕೋಟ ಮನವಿ

ಉಡುಪಿ: ಮುಂಬಯಿ ಮತ್ತು ಮಂಗಳೂರು ನಡುವೆ ಕಳೆದ ಮೂರು ದಶಕಗಳಿಂದ ಸಂಚರಿ ಸುತ್ತಿರುವ ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲಿಗೆ ಕಳೆದ ತಿಂಗಳು ಅಳವಡಿಸಿದ ಅತ್ಯಾಧುನಿಕ ಎಲ್‌ಎಚ್‌ಬಿ ಕೋಚ್‌ಗಳು ಕಳಪೆಯಾಗಿದ್ದು, ಅವುಗಳಲ್ಲಿರುವ ಲೋಪಗಳ ಕುರಿತು ಸಾರ್ವಜನಿಕರಿಂದ ಬಂದ ದೂರಿನ ಹಿನ್ನೆಲೆಯಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವ ಸೋಮಣ್ಣರನ್ನು ಭೇಟಿ ಮಾಡಿದ ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಕೋಚ್‌ಗಳಲ್ಲಿರುವ ಲೋಪಗಳನ್ನು ಕೂಡಲೇ ಸರಿಪಡಿಸುವಂತೆ ಮನವಿ ಅರ್ಪಿಸಿ ಒತ್ತಾಯಿಸಿದರು.

ಮತ್ಸ್ಯಗಂಧ ರೈಲಿಗೆ 2024ರಲ್ಲಿ ತಯಾರಾದ ಹೊಸ ಎಲ್‌ಎಚ್‌ಬಿ ಕೋಚ್‌ಗಳ ಜೊತೆಗೆ 2020ರಲ್ಲಿ ತಯಾರಾದ ಹಳೆಯ ಎಲ್‌ಎಚ್‌ಬಿ ಕೋಚ್‌ಗಳನ್ನು ಸೇರಿಸಿದ ಇಲಾಖೆಯ ಕಾರ್ಯವನ್ನು ಸಚಿವರ ಗಮನಕ್ಕೆ ತಂದು ಅವುಗಳನ್ನು ಕೂಡಲೇ ಬದಲಿಸುವಂತೆ ಆಗ್ರಹಿಸಿದ್ದಾರೆ.

ಮತ್ಸ್ಯಗಂಧ ರೈಲಿನ ಎಲ್ಲಾ ಟ್ರಿಪ್‌ಗಳಲ್ಲೂ ಯಾವುದೇ ದೂರುಗಳು ಬಾರದಂತೆ 2024ರಲ್ಲೇ ತಯಾ ರಾದ ಉತ್ತಮ ಕೋಚ್‌ಗಳನ್ನೇ ಬಳಸುವಂತೆ ಸಂಬಂಧಿಸಿದ ಜೋನಲ್ ರೈಲ್ವೇಗಳಿಗೆ ತಿಳಿಸಲು ಕೋರಿದ್ದು, ಸಚಿವರಿಂದ ಈ ಬಗ್ಗೆ ಸಕಾರತ್ಮಕ ಪ್ರತಿಕ್ರಿಯೆ ಲಭಿಸಿದೆ ಎಂದು ಸಂಸದರು ತಿಳಿಸಿದ್ದಾರೆ.

ಕರಾವಳಿ ಹಾಗೂ ಮುಂಬಯಿ ನಗರಗಳನ್ನು ಬೆಸೆಯುವ ಪ್ರತಿಷ್ಟಿತ ಮತ್ಸ್ಯಗಂಧ ರೈಲು ಎಲ್‌ಎಚ್‌ಬಿ ಕೋಚುಗಳೊಂದಿಗೆ ಕಳೆದ ಫೆೆಬ್ರವರಿ 17ರಿಂದ ಮೇಲ್ದರ್ಜೆಗೇರಿದ್ದು ಪ್ರಯಾಣಿಕರಿಗೆ ಸುರಕ್ಷಿತ ಪ್ರಯಾಣದ ಭರವಸೆ ನೀಡಿದೆ.

ಆದರೆ ಮತ್ಸ್ಯಗಂಧ ರೈಲಿನ ಎರಡೂ ರೇಕುಗಳ ಜೊತೆ ಮಂಗಳೂರು ಮತ್ತು ಕೇರಳದ ತಿರುವನಂತ ಪುರಂ ನಡುವೆ ಓಡುವ ಇನ್ನೊಂದು ರೈಲಿನ ರೇಕುಗಳ ಹೊಂದಾಣಿಕೆ ವ್ಯವಸ್ಥೆ ಇದ್ದು, ಈ ರೈಲಿನ ಎರಡು ರೇಕೂಗಳೂ ಸೇರಿ 2024 ರ ಎರಡು ಹೊಸ ರೇಕುಗಳ ಜತೆ ಮತ್ತೆರಡು 2020ರ ಹಳೇ ರೇಕುಗಳೂ ಸೇರಿಕೊಂಡ ಕಾರಣ, ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲಿನ ಕೆಲವು ಪ್ರಯಾಣದ ವೇಳೆ ಹಳೆಯ ಎಲ್‌ಎಚ್‌ಬಿ ರೇಕುಗಳು ಸೇರುವುದು ಗಮನಕ್ಕೆ ಬಂದಿದ್ದು; ಈ ಹಿನ್ನೆಲೆಯಲ್ಲಿ ಬೇರೆ ಬೇರೆ ಸಾಮಾಜಿಕ ಜಾಲತಾಣ ಗಳಲ್ಲಿ ಹಳೆಯ ಕೋಚುಗಳ ಸಮಸ್ಯೆಗಳ ಬಗ್ಗೆ ಬಂದ ದೂರುಗಳು ಸಂಸದರಿಗೆ ತಲುಪಿದ್ದವು.

ಈಗಾಗಲೇ ಅಧಿಕಾರಿಗಳಿಗೆ ಈ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ತಿಳಿಸಲಾಗಿದೆ. ಮಂಗಳೂರು ಮುಂಬಯಿ ನಡುವೆ ಓಡುವ ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲಿಗೆ ಉತ್ತಮ ಕೋಚುಗಳನ್ನಷ್ಟೇ ಜೋಡಿಸಲು ತಿಳಿಸಿದ್ದು, ಹಳೆಯ ಕೋಚುಗಳನ್ನು ಅಳವಡಿಸುವ ಪದ್ದತಿಗೆ ಮತ್ತು ಹೊಸ ಹಾಗು ಹಳೇ ಕೋಚುಗಳ ಮಿಶ್ರಣ ಮಾಡಿ ಓಡಿಸುವ ಪದ್ದತಿಯನ್ನು ಅನುಸರಿಸದಂತೆ ಸಚಿವರಿಗೆ ಸಂಸದರು ಮನವಿ ಮಾಡಿದ್ದಾರೆ.

ಸಚಿವರು ಈ ಬಗ್ಗೆ ಮತ್ಸ್ಯಗಂಧ ರೈಲಿನ ಮೂಲ ವಲಯವಾದ ದಕ್ಷಿಣ ರೈಲ್ವೇಗೆ ತಕ್ಷಣವೇ ಈ ಸಮಸ್ಯೆ ಪರಿಹರಿಸಲು ಸೂಚನೆ ನೀಡಿದ್ದಾರೆ ಎಂದು ಸಂಸದರ ಪತ್ರಿಕಾ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago