Featured

ಉಡುಪಿ : ಮತ ಎಣಿಕೆ- ಸಾರ್ವಜನಿಕ ಸಂಚಾರ ವ್ಯವಸ್ಥೆಯಲ್ಲಿ ತಾತ್ಕಾಲಿಕ ಬದಲಾವಣೆ – vishwanews24

ಉಡುಪಿ : ಮತ ಎಣಿಕೆ- ಸಾರ್ವಜನಿಕ ಸಂಚಾರ ವ್ಯವಸ್ಥೆಯಲ್ಲಿ ತಾತ್ಕಾಲಿಕ ಬದಲಾವಣೆ

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ-2024 ರ ಮತ ಎಣಿಕಾ ಕಾರ್ಯವು ಜೂನ್ 4 ರಂದು ಉಡುಪಿಯ ಅಜ್ಜರಕಾಡು ಸೈಂಟ್ ಸಿಸಿಲಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಲಿರುವ ಹಿನ್ನೆಲೆ, ಅಂದು ಬೆಳಗ್ಗೆ 5 ಗಂಟೆಯಿAದ ಮತ ಎಣಿಕೆ ಮುಗಿಯುವ ವರೆಗೆ ಸದ್ರಿ ರಸ್ತೆಯಲ್ಲಿ ಸಾರ್ವಜನಿಕ ಸಂಚಾರ ವ್ಯವಸ್ಥೆಯಲ್ಲಿ ಈ ಕೆಳಗಿನಂತೆ ಮಾರ್ಪಾಡುಗಳನ್ನು ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

ಜೂನ್ 4 ರಂದು ಬ್ರಹ್ಮಗಿರಿ ಜಂಕ್ಷನ್‌ನಿoದ ನಾಯಕ್ ಕ್ಯಾಂಟೀನ್ ವರೆಗಿನ ಮತ್ತು ಅಜ್ಜರಕಾಡು ಜಂಕ್ಷನ್‌ನಿoದ ಸುದರ್ಶನ್ ರೆಸಿಡೆನ್ಸಿ ವರೆಗಿನ ರಸ್ತೆಯಲ್ಲಿ ಸಂಚಾರ ನಿಷೇಧಿಸಿದ್ದು, ಬದಲಿ ಮಾರ್ಗದಲ್ಲಿ ಸಂಚರಿಸಬೇಕು.

ಮತ ಎಣಿಕೆಯ ಸಂಬoಧ ಸರಕಾರಿ ಅಧಿಕಾರಿಗಳ ವಾಹನಗಳ ಪಾರ್ಕಿಂಗ್ ದೃಷ್ಠಿಯಿಂದ ಜೂನ್ 4 ರಂದು ಬ್ರಹ್ಮಗಿರಿ ಜಂಕ್ಷನ್‌ನಿoದ ಅಜ್ಜರಕಾಡು ಜಂಕ್ಷನ್ ವರೆಗಿನ ರಸ್ತೆಯಲ್ಲಿ ಸಂಚಾರ ನಿಷೇಧಿಸಲಾಗಿದೆ ಹಾಗೂ ಅಜ್ಜರಕಾಡು ಜಂಕ್ಷನ್‌ನಿoದ ಬ್ರಹ್ಮಗಿರಿ ಜಂಕ್ಷನ್ ವರೆಗಿನ ರಸ್ತೆಯನ್ನು ಏಕಮುಖ ರಸ್ತೆಯನ್ನಾಗಿ ಬದಲಾಯಿಸಿದೆ.

ಈ ಅಧಿಸೂಚನೆಯನ್ನು ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ನಿಯಮ 1989 ರ ನಿಯಮ 221 (5)(ಎ) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಈ ಆದೇಶವನ್ನು ಹೊರಡಿಸಿರುತ್ತಾರೆ.

 

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago