Featured

ಉಡುಪಿ : ಮದ್ಯ ಪ್ರಿಯರಿಗೆ ಬಿಗ್​ ಶಾಕ್ ! ಇಂದಿನಿಂದ ಮೇ 19ರವರೆಗೆ ಮದ್ಯ ಮಾರಾಟಗಾರರಿಂದ ಮುಷ್ಕರ – Vishwanews24

ಮದ್ಯ ಪ್ರಿಯರಿಗೆ ಬಿಗ್​ ಶಾಕ್!

ಇಂದಿನಿಂದ ಮೇ 19ರವರೆಗೆ ಮದ್ಯ ಮಾರಾಟಗಾರರಿಂದ ಮುಷ್ಕರ

ಒಂದೊಂದು ದಿನ ಒಂದೊಂದು ಜಿಲ್ಲೆಯಲ್ಲಿ ಮದ್ಯ ಮಾರಾಟಗಾರರ ಪ್ರತಿಭಟನೆ

ಮುಷ್ಕರ ಎಲ್ಲೆಲ್ಲಿ? ಯಾವಾಗ?

ಉಡುಪಿ: ಇಂದಿನಿಂದ ಮೇ 19ರವರೆಗೆ ಮದ್ಯ ಮಾರಾಟಗಾರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಕೆಎಸ್‍ಪಿಸಿಎಲ್ ಹೊಸ ನೀತಿಯಿಂದ ಮದ್ಯ ಮಾರಾಟಗಾರರಿಗೆ ಸಮಸ್ಯೆ ಎದುರಾಗಿದೆ. ಮದ್ಯ ಖರೀದಿ ಮಾಡುವ ವ್ಯವಸ್ಥೆ ಬದಲಾಗಿರುವುದರಿಂದ ನಮಗೆ ಬಹಳ ತೊಂದರೆಯಾಗಿದೆ ಎಂದು ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟ ಗಂಭೀರ ಆರೋಪ ಮಾಡಿದೆ.

ಕೆಎಸ್‍ಪಿಸಿಎಲ್‍ನಿಂದ ಮ್ಯಾನುವಲ್ ಮೆತಡ್ ಮೂಲಕ ಇಷ್ಟು ವರ್ಷ ವೈನ್ ಮರ್ಚೆಂಟ್ಸ್, ಬಾರ್ ಮಾಲೀಕರು ಖರೀದಿ ಮಾಡುತ್ತಿದ್ದರು. ಈಗ ವೆಬ್‍ಸೈಟ್ ಓಪನ್ ಮಾಡಿ, ಮಾಲೀಕರು ಲಾಗಿನ್ ಆಗಿ ತಮಗೆ ಬೇಕಾದ ಮದ್ಯಗಳನ್ನು ಆಯ್ಕೆ ಮಾಡಿ, ಆನ್‍ಲೈನ್ ಮೂಲಕ ಹಣ ರವಾನೆ ಮಾಡಬೇಕು. ರಾತ್ರಿ 9 ರಿಂದ ಬೆಳಗ್ಗೆ ಒಂಬತ್ತರವರೆಗೆ ಲಿಸ್ಟ್ ಫಿಲ್ ಮಾಡಿ, ಗೋದಾಮಿನಲ್ಲಿ ದಾಸ್ತಾನಿರುವ ಮದ್ಯಗಳನ್ನು ಮಾತ್ರ ಪಡೆದುಕೊಳ್ಳಬೇಕು. ಈ ನೂತನ ಪದ್ಧತಿ ಬಾರ್ ಮತ್ತು ವೈನ್ ವ್ಯಾಪಾರಿಗಳಿಗೆ ಆತಂಕ ಸೃಷ್ಟಿಸಿದೆ.

ಗ್ರಾಹಕರಿಂದ ಬೇಡಿಕೆ ಇರುವ ಮದ್ಯ ಸಿಗುವುದಿಲ್ಲ. ಶ್ರೀಮಂತ ಬಾರ್ ಮಾಲೀಕರು ವೈನ್ ಶಾಪ್ ಮಾಲೀಕರು ಬೇಕಾದಷ್ಟು ಮದ್ಯವನ್ನು ಖರೀದಿ ಮಾಡುತ್ತಾರೆ. ಸಣ್ಣ ಉದ್ದಿಮೆದಾರರಿಗೆ ಇದರಿಂದ ಬಹಳ ಸಮಸ್ಯೆಯಾಗಿದೆ. ರಾಜ್ಯದಲ್ಲಿ ಕಾರ್ಯಾಚರಿಸುತ್ತಿರುವ ಶೇ.80 ಜನಕ್ಕೆ ಕಳೆದ ಒಂದು ತಿಂಗಳಿನಿಂದ ಸಮಸ್ಯೆಯಾಗಿದೆ. ಈ ಸಮಸ್ಯೆ ಬಗ್ಗೆ ಕುಳಿತು ಮಾತನಾಡಿ ಬಗೆಹರಿಸಿಕೊಳ್ಳಲು ಕೆಎಸ್‍ಪಿಸಿಎಲ್ ಎಂಡಿ ತಯಾರಿಲ್ಲ. ಈ ಬಗ್ಗೆ ಸಭೆ ಮಾಡಿ ಸಮಸ್ಯೆ ಬಗೆಹರಿಸುವುದಾಗಿ ಹೇಳಿರುವ ಆಯುಕ್ತರು ಒಂದು ತಿಂಗಳು ಕಳೆದರೂ ಇನ್ನೂ ಆಗಿಲ್ಲ ಅಂತ ಆಕ್ರೋಶ ಹೊರ ಹಾಕಿದ್ದಾರೆ.

ಒಂದೊಂದು ದಿನ ಒಂದೊಂದು ಜಿಲ್ಲೆಯಲ್ಲಿ ಮದ್ಯ ಮಾರಾಟಗಾರರು ಪ್ರತಿಭಟನೆಗೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ.

ಮುಷ್ಕರ ಎಲ್ಲೆಲ್ಲಿ? ಯಾವಾಗ?
ಮೇ 6 : ಕಲಬುರಗಿ, ಬೀದರ್, ರಾಯಚೂರು, ಯಾದಗಿರಿ
ಮೇ 10 : ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಗದಗ, ಕೊಪ್ಪಳ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಹಾವೇರಿ
ಮೇ 12 : ಮೈಸೂರು, ಚಿಕ್ಕಮಗಳೂರು, ಹಾಸನ, ಮಂಡ್ಯ, ಮಂಗಳೂರು, ಕೊಡಗು, ಶಿವಮೊಗ್ಗ, ಉಡುಪಿ, ಉತ್ತರಕನ್ನಡ
ಮೇ 17 : ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು
ಮೇ 19 : ಬೆಂಗಳೂರು ನಗರ ವಿಭಾಗದ ಕೆಎಸ್‍ಬಿಸಿಎಲ್ ಡಿಪೋಗಳಲ್ಲಿ ಮದ್ಯ ಖರೀದಿ ಮಾಡದಿರಲು ಬಾರ್ ಮಾಲೀಕರ ಸಂಘ ನಿರ್ಧರಿಸಿದೆ.

Vishwa News 24

Recent Posts

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

10 minutes ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

16 minutes ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

45 minutes ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

58 minutes ago

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago