Featured

ಉಡುಪಿ : ಮಧ್ವಾಚಾರ್ಯರು 850 ವರ್ಷಗಳ ಹಿಂದೆ ಕೃಷ್ಣಮಠ ಸ್ಥಾಪಿಸಿದ್ದರು : ರಘುಪತಿ ಭಟ್  – Vishwanews24

ಉಡುಪಿ: ಮಧ್ವಾಚಾರ್ಯರು 850 ವರ್ಷಗಳ ಹಿಂದೆ ಕೃಷ್ಣಮಠ ಸ್ಥಾಪಿಸಿದ್ದರು ..

ಮುಸಲ್ಮಾನ ಅರಸರು ಯಾವುದೇ ಜಾಗವನ್ನು ಕೃಷ್ಣ ಮಠಕ್ಕಾಗಲಿ ಅನಂತೇಶ್ವರ ಕ್ಕಾಗಲಿ ನೀಡಿಲ್ಲ ಎನ್ನುವುದು ಸ್ಪಷ್ಟ..

ಮಿಥುನ್ ರೈ ಯಾವ ಮುಸಲ್ಮಾನ ರಾಜನ ಬಗ್ಗೆ ಮಾತನಾಡುತ್ತಾರೋ ನಮಗೆ ತಿಳಿದಿಲ್ಲ :  ರಘುಪತಿ ಭಟ್

ಉಡುಪಿ: ಉಡುಪಿಯಲ್ಲಿರುವ ಪ್ರಸಿದ್ಧ ಶ್ರೀಕೃಷ್ಣ ಮಠ ನಿರ್ಮಾಣಕ್ಕೆ ಮುಸ್ಲಿಂ ರಾಜರೊಬ್ಬರು ಜಾಗ ನೀಡಿದ್ದಾರೆ ಎಂಬ ಕಾಂಗ್ರೆಸ್‌ ಮುಖಂಡ ಮಿಥುನ್‌ ರೈ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಉಡುಪಿ ಶಾಸಕ ಕೆ ರಘುಪತಿ ಭಟ್ “ಮಿಥುನ್ ರೈ ಯಾವ ಮುಸಲ್ಮಾನ ರಾಜನ ಬಗ್ಗೆ ಮಾತನಾಡುತ್ತಾರೋ ನಮಗೆ ತಿಳಿದಿಲ್ಲ,ಮಧ್ವಾಚಾರ್ಯರು 850 ವರ್ಷಗಳ ಹಿಂದೆ ಕೃಷ್ಣಮಠ ಸ್ಥಾಪಿಸಿದ್ದರು” ಎಂದು ಹೇಳಿದ್ದಾರೆ.

“ಮುಸಲ್ಮಾನ ಅರಸರು ಯಾವುದೇ ಜಾಗವನ್ನು ಕೃಷ್ಣ ಮಠಕ್ಕಾಗಲಿ ಅನಂತೇಶ್ವರ ಕ್ಕಾಗಲಿ ನೀಡಿಲ್ಲ ಎನ್ನುವುದು ಸ್ಪಷ್ಟ. ಅನಂತೇಶ್ವರ ದೇಗುಲಕ್ಕೆ ರಾಮಭೋಜನು ಭೂಮಿ ಕೊಟ್ಟ ಬಗ್ಗೆ ಉಲ್ಲೇಖ ಇದೆ. ಮುಂದೆ ಆ ಭೂಮಿಯೇ ಕೃಷ್ಣ ಮಠಕ್ಕೆಂದು ಬಳಕೆಯಾಗಿದೆ. ಅನಂತೇಶ್ವರ ದೇಗುಲ ನಂತರ ಕೃಷ್ಣ ಮಠ ನಿರ್ಮಾಣಗೊಂಡಿದೆ. ಸದ್ಯ ಇರುವ ಜಾಮಿಯಾ ಮಸೀದಿ ಕೂಡ ಜಂಗಮರ ಮಠದ ಜಾಗದಲ್ಲಿತ್ತು ಎಂದು ಹೇಳಲಾಗುತ್ತಿದೆ. ಶೋಕಮಾತಾ ಚರ್ಚ್ ಕೃಷ್ಣ ಮಠದವರು ಕೊಟ್ಟ ಲೀಸ್ ಭೂಮಿಯಲ್ಲಿದೆ.ಉಡುಪಿ ಸೌಹಾರ್ದತೆಗೆ ಹೆಸರಾದ ಕ್ಷೇತ್ರವಾಗಿದ್ದುಮುಸಲ್ಮಾನರಿಗೂ ಮಸೀದಿ ಕಟ್ಟಲು ಜಂಗಮರ ಮಠ ಜಾಗ ಕೊಟ್ಟಿದೆ. ಕ್ರಿಶ್ಚಿಯನ್ ಸಮುದಾಯಕ್ಕೆ ಚರ್ಚ್ ಕಟ್ಟಲು ಕೃಷ್ಣಾಪುರ ಮಠ ಭೂಮಿ ಕೊಟ್ಟಿದೆ” ಎಂದು ಹೇಳಿದ್ದಾರೆ.

ಇನ್ನು ಹಾಜಿ ಅಬ್ದುಲ್ಲಾ ಸಾಹೇಬರು ಭಕ್ತರಾಗಿ ಕೃಷ್ಣ ಮಠಕ್ಕೆ ಸಹಾಯ ಮಾಡಿದ ಉಲ್ಲೇಖವಿದೆ. ಮಿಥುನ್ ರೈ ಯಾವ ಮುಸಲ್ಮಾನ ರಾಜನ ಬಗ್ಗೆ ಮಾತನಾಡುತ್ತಾರೋ ಗೊತ್ತಿಲ್ಲ. ಮಠದ ಚಿಂತೆ ಬಿಟ್ಟು ಅವರು ಅಯೋಧ್ಯೆಯ ಪರಿಸ್ಥಿತಿ ಬಗ್ಗೆ ಚಿಂತನೆ ಮಾಡಲಿ. ಮಥುರದಲ್ಲಿ ಕೃಷ್ಣ ಮಂದಿರ, ಕಾಶಿ ಬಗ್ಗೆ ದೇಶದ ಜನತೆಗೆ ಗೊತ್ತಿದೆ.ಈಗ ಒಂದೊಂದೇ ಕ್ಷೇತ್ರಗಳು ಮುಕ್ತವಾಗುತ್ತಿದೆ ಎಂದು ತಿರುಗೇಟು ನೀಡಿದ್ದಾರೆ.

 

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

13 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

13 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

14 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

14 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

15 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

15 hours ago