ಉಡುಪಿ : ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು – vishwanews24

Featured, ಉಡುಪಿ

ಉಡುಪಿ : ಮನೆಗೆ ನುಗ್ಗಿ 44.60 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

ಉಡುಪಿ,: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದ ಘಟನೆ  ನಗರದ ಒಳಕಾಡು ಎಂಬಲ್ಲಿ ನಡೆದಿದೆ.

ಶೈಲಾ ವಿಲ್ಹೆಲ್ಮೀನಾ (53) ಮತ್ತು ಮನೆಯವರು ರಾತ್ರಿ ಊಟ ಮಾಡಿ ಮಲಗಿದ್ದರು.

ಈ ವೇಳೆ ಮನೆಗೆ ನುಗ್ಗಿದ ಕಳ್ಳರು, ಕೋಣೆಯೊಂದರ ಕಪಾಟಿನಲ್ಲಿಟ್ಟಿದ್ದ 44.60 ಲಕ್ಷ ರೂ. ಮೌಲ್ಯದ 368 ಗ್ರಾಂ ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆ. ಬೆಳಗ್ಗೆ ಚರ್ಚ್‌ಗೆ ತೆರಳಲು ಚಿನ್ನಾಭರಣ ಧರಿಸಲು ನೋಡಿದಾಗ ಈ ಕಳವು ಪ್ರಕರಣ ಬೆಳಕಿಗೆ ಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಪುತ್ತೂರು: ಕಾಣೆಯಾಗಿದ್ದ ಯುವಕನ ಮೃತದೇಹ ಪತ್ತೆ – vishwanews24

Leave a Reply