Featured

ಉಡುಪಿ: ಮನೆಯಲ್ಲಿದ್ದ ಚಿನ್ನ ವಜ್ರಾಭರಣ ಕಳವು ಪ್ರಕರಣ: ಹೋಮ್ ನರ್ಸ್ ಬಂಧನ – vishwanews24

ಉಡುಪಿ: ಮನೆಯಲ್ಲಿದ್ದ ಚಿನ್ನ ವಜ್ರಾಭರಣ ಕಳವು ಪ್ರಕರಣ: ಹೋಮ್ ನರ್ಸ್ ಬಂಧನ

ಉಡುಪಿ: ತಾನು ಹೋಮ್ ನರ್ಸ್ ಆಗಿದ್ದ ಮನೆಯಲ್ಲಿದ್ದ 31 ಲಕ್ಷ ರೂ.ಗೂ ಅಧಿಕ ಮೌಲ್ಯದ ವಜ್ರಾಭರಣ ಹಾಗೂ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದ ವ್ಯಕ್ತಿಯನ್ನು ನಗರ ಪೊಲೀಸರು ಬಂಧಿಸಿದ್ದು, ಕಳವು ಮಾಡಿದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ನ.17ರಂದು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಸಾದ ಎಸ್‌. ಎಸ್‌ ಎಂಬವರು ದೂರು ದಾಖಲಿಸಿದ್ದು, ಅವರ ಮನೆ ಯಲ್ಲಿ ಹೋಂ ನರ್ಸ ಆಗಿ ಕೆಲಸ ಮಾಡಿಕೊಂಡಿದ್ದ, ಸಿದ್ದಪ್ಪ ಕೆ. ಕೊಡ್ಲಿ ಎಂಬಾತನು ಅಂದು ಬೆಳಗ್ಗೆ 9-15 ಗಂಟೆಯಿಂದ ಮ: 1-15 ಘಂಟೆಯ ಮದ್ಯಾವಧಿಯಲ್ಲಿ ಅವರ ಮನೆಯ ಹಾಲ್‌ ನ ಗಾಜಿನ ಬೀರುವಿನಲ್ಲಿ ಹಾಗೂ ಮಲಗುವ ಕೋಣೆಯಲ್ಲಿ ಇರಿಸಿದ್ದ ಗ್ರಾಡ್ರೇಜ್ ನ ಲಾಕರ್‌ ನಲ್ಲಿ ಇರಿಸಿದ್ದ ಸುಮಾರು 427 ಗ್ರಾಂ ತೂಕದ ರೂ: 31,17,100 ಮೌಲ್ಯದ ಚಿನ್ನ ಹಾಗೂ ವಜ್ರಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದಾಗಿ ಪ್ರಕರಣ ದಾಖಲಿಸಿದ್ದರು.

ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡ ಪಿ.ಐ, ರಾಮಚಂದ್ರ ನಾಯಕ್ ಮತ್ತವರ ತಂಡ ನ. 19 ರಂದು ಆರೋಪಿ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಸಿದ್ದಪ್ಪ ಕೆ. ಕೊಡ್ಲಿ(23)ನನ್ನು ದಸ್ತಗಿರಿ ಮಾಡಿ, ಕಳವು ಮಾಡಿ ಅಡಗಿಸಿಟ್ಟಿದ್ದ ಸ್ಥಳದಿಂದ ಅಂದಾಜು ರೂ: 30,00,000 ಮೌಲ್ಯದ 374.45 ಗ್ರಾಮ್ಸ್‌ ತೂಕದ ಚಿನ್ನ, ಬೆಳ್ಳಿ ಹಾಗೂ ವಜ್ರಾಭರಣಗಳನ್ನು ಸ್ವಾಧೀನಪಡಿಸಿ ಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಉಡುಪಿ ನಗರ ಪೊಲೀಸ್‌ ಠಾಣಾ ಪಿಎಸ್‌ಐ ಈರಣ್ಣ ಶಿರಗುಂಪಿ, ಪುನೀತ್, ಉಡುಪಿ ಸೆನ್‌ ಪೊಲೀಸ್‌ ಠಾಣೆ ಪಿ. ಎಸ್. ಐ ಪವನ್‌ ಕುಮಾರ್‌, ಉಡುಪಿ ನಗರ ಠಾಣೆಯ ಅಬ್ದುಲ್‌ ಬಶೀರ್‌, ಸಂತೋಷ, ಚೇತನ್‌ ಮತ್ತು ಸೆನ್ ಠಾಣೆಯ ಪ್ರವೀಣ ಕುಮಾರ್, ಪ್ರವೀಣ್ ಭಾಗವಹಿಸಿದ್ದರು.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

2 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

3 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

3 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

6 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

6 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

7 hours ago