ಉಡುಪಿ: ಉಡುಪಿಯ ಕೊಡವೂರು ಸಮೀಪದ ಮೂಡುಬೆಟ್ಟುವಿನ ಗೋಪಾಲ ಎಂಬವರ ಮನೆಯಲ್ಲಿ ಗ್ಯಾಸ್ ಸೋರಿಕೆಯಾಗಿ ಲಿಂಡರ್ ಸ್ಫೋಟಗೊಂಡು ಇಬ್ಬರು ಗಾಯಗೊಂಡ ಘಟನೆ ಸಂಭವಿಸಿದೆ.
ಅಡುಗೆ ಸಿಲಿಂಡರ್ ಸ್ಫೋಟಗೊಂಡ ತೀವ್ರತೆಗೆ ಮನೆಯ ಪೀಠೋಪಕರಣಗಳು ಸುಟ್ಟು ಹೋಗಿವೆ. ಕಿಟಕಿಯ ಗಾಜುಗಳು ಒಡೆದು ಹೋಗಿದ್ದು, ಅಡುಗೆ ಕೋಣೆಯ ಪಾತ್ರೆ, ಸಾಮಗ್ರಿಗಳು ಚೆಲ್ಲಾಪಿಲ್ಲಿಯಾಗಿವೆ.
ಅಡುಗೆ ಕೋಣೆಯಲ್ಲಿದ್ದ ಸಿಲಿಂಡರ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಕ್ಷಣಾರ್ಧದಲ್ಲಿ ಸಿಲಿಂಡರ್ ಸ್ಫೋಟಗೊಂಡು ಬೆಂಕಿಯ ಕೆನ್ನಾಲಿಗೆ ಸಂಪೂರ್ಣ ಕೋಣೆಗೆ ವ್ಯಾಪಿಸಿದೆ. ಅವಘಡ ಸಂಭವಿಸುತ್ತಿದ್ದಂತೆ ಮನೆಯೊಳಗಿದ್ದವರು ಹೊರಗೆ ಓಡಿ ಬಂದು ಬಚಾವಾದರು.ಈ ವೇಳೆ ಸಾವಿತ್ರಿ ಹಾಗೂ ಇನ್ನೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ವಿಷಯ ತಿಳಿದು ಸಮಾಜ ಸೇವಕ ಈಶ್ವರ್ ಮಲ್ಪೆ ಹಾಗೂ ಸ್ಥಳೀಯರು ಸೇರಿ ಬೆಂಕಿ ನಂದಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…