ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕ ಮೃತಪಟ್ಟ ಘಟನೆ ಹೆರ್ಗಾ ಗ್ರಾಮದ ಕೆಳಪರ್ಕಳ ಡೌನ್‌ನಲ್ಲಿ ಸೋಮವಾರ ತಡರಾತ್ರಿ ನಡೆದಿದೆ.
ಆತ್ರಾಡಿ ನಿವಾಸಿ ಸನತ್ (21) ಮೃತಪಟ್ಟವರು. ಅವರು ಮಣಿಪಾಲದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.
ಸನತ್ ಅವರು ಸ್ನೇಹಿತರೊಂದಿಗೆ ಮಣಿಪಾಲಕ್ಕೆ ಬಂದು ಊಟ ಮುಗಿಸಿ, ರಾತ್ರಿ ಸುಮಾರು 1.25ಕ್ಕೆ ಸ್ನೇಹಿತನಿಗೆ ಸೇರಿದ KA-20-EP-5934 ನೋಂದಣಿ ಸಂಖ್ಯೆಯ ಬುಲೆಟ್ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಹೆರ್ಗಾ ಗ್ರಾಮದ ಕೆಳಪರ್ಕಳ ಡೌನ್‌ನ ಗೋಪಾಲಕೃಷ್ಣ ದೇವಸ್ಥಾನದ ಬಳಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಸನತ್ ಬೈಕ್ ಸಮೇತ ರಸ್ತೆ ಬದಿಯ ಚರಂಡಿಗೆ ಎಸೆಯಲ್ಪಟ್ಟಿದ್ದು, ತಲೆ ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಗಳಾಗಿದ್ದವು. ತಕ್ಷಣ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…