ಉಡುಪಿ

ಉಡುಪಿ : ಮರಳುಗಾರಿಕೆ ನಡೆಸಲು ಹಸಿರು ನಿಶಾನೆ

ಉಡುಪಿ: ಕರಾವಳಿ ನಿಯಂತ್ರಣ ವಲಯ ವ್ಯಾಪ್ತಿಗೊಳಪಡುವ (ಸಿಆರ್‌ಝೆಡ್‌) ಉಡುಪಿ ಹಾಗೂ ಬ್ರಹ್ಮಾವರ ತಾಲ್ಲೂಕುಗಳಲ್ಲಿ ಮರಳುಗಾರಿಕೆ ನಡೆಸಲು ಕೊನೆಗೂ ಅನುಮತಿ ಸಿಕ್ಕಿದೆ.

ಜಿಲ್ಲೆಯಲ್ಲಿ ಮರಳಿನ ಸಮಸ್ಯೆ ತೀವ್ರವಾಗಿದ್ದರಿಂದ ಜಿಲ್ಲಾಡಳಿತವು ಸಿಆರ್‌ಝೆಡ್‌ ವ್ಯಾಪ್ತಿಯಲ್ಲಿರುವ ಮರಳು ದಿಬ್ಬಗಳನ್ನು ಗುರುತಿಸಿ, ಮರಳು ತೆಗೆಯಲು ಅನುಮತಿ ನೀಡುವಂತೆ ಈಚೆಗೆ ಕರ್ನಾಟಕ ರಾಜ್ಯ ಕರಾವಳಿ ವಲಯ, ಅರಣ್ಯ ಪರಿಸರ ಹಾಗೂ ಜೀವಿಶಾಸ್ತ್ರ ಇಲಾಖೆಗೆ ಪ್ರಸ್ತಾವ ಸಲ್ಲಿಸಿತ್ತು.
ಜಿಲ್ಲಾಡಳಿತದ ಮನವಿಗೆ ಒಪ್ಪಿಗೆ ದೊರೆತಿದ್ದು, ನಿಯಮಗಳಿಗೆ ಬದ್ಧವಾಗಿ ಮರಳು ದಿಬ್ಬಗಳನ್ನು ತೆರವುಗೊಳಿಸುವಂತೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌  ಮಾಹಿತಿ ನೀಡಿದರು.

ಉಡುಪಿ ಹಾಗೂ ಬ್ರಹ್ಮಾವರ ತಾಲ್ಲೂಕುಗಳಲ್ಲಿ 9 ಮರಳು ದಿಬ್ಬಗಳನ್ನು ಗುರುತಿಸಿ ಇಲಾಖೆಗೆ ಪ್ರಸ್ತಾವ ಕಳುಹಿಸಲಾಗಿತ್ತು. ಅದರಲ್ಲಿ 7 ದಿಬ್ಬಗಳ ತೆರವಿಗೆ ಮಾತ್ರ ಒಪ್ಪಿಗೆ ಸಿಕ್ಕಿದೆ. ಯಾವ ಜಾಗದಲ್ಲಿ ಮರಳು ತೆಗೆಯಬಹುದು ಎಂಬ ವಿವರವನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಚೇರಿಯ ನಾಮಫಲಕದಲ್ಲಿ ಹಾಕಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

2011ಕ್ಕಿಂತ ಹಿಂದೆ ಮರಳು ತೆಗೆಯಲು ಅರ್ಹ ಪರವಾನಗಿ ಹೊಂದಿರುವವರ ಪಟ್ಟಿಯನ್ನು ಸಹ ಪ್ರಕಟಿಸಲಾಗಿದೆ. ಅ.27ರ ಸಂಜೆ 5ರವರೆಗೆ ಅರ್ಜಿ ಹಾಕಲು ಸಮಯ ನೀಡಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು ಎಂದು ಡಿಸಿ ಹೇಳಿದರು.
ಪರವಾನಗಿ ಪಡೆಯಲು ಸರ್ಕಾರ ನಿಗಧಿಪಡಿಸಿರುವ ಹಣ ಪಾವತಿಸಬೇಕು. ಅಗತ್ಯ ದಾಖಲಾತಿಗಳನ್ನು ಸಲ್ಲಿಸಬೇಕು. ಷರತ್ತುಗಳಿಗೆ ಒಪ್ಪಿಗೆ ನೀಡಬೇಕು. ಇವೆಲ್ಲವನ್ನು ಪರಿಗಣಿಸಿ ಅರ್ಹರಿಗೆ ಮಾತ್ರ ಪರ್ಮಿಟ್ ನೀಡಲಾಗುವುದು. ನಾಳೆ ಅರ್ಜಿ ಹಾಕಿದರೆ, ನಾಳೆಯೇ ಪರವಾನಗಿ ನೀಡುತ್ತೇವೆ. ವಿಳಂಬ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಅಕ್ರಮವಾಗಿ ಎಲ್ಲೆಂರದಲ್ಲಿ ಮರಳು ತೆಗೆಯಲು ಅವಕಾಶವಿಲ್ಲ. ಜಿಪಿಎಸ್‌ ನೆರವಿನಿಂದ ಸಿಆರ್‌ಝೆಡ್‌ ವ್ಯಾಪ್ತಿಯಲ್ಲಿ ಜಿಯೊ ಫೆನ್ಸಿಂಗ್ ಮೂಲಕ ಮರಳು ದಿಬ್ಬಗಳನ್ನು ಗುರುತಿಸಲಾಗಿದೆ. ಪರವಾನಗಿದಾರರು ಜಿಲ್ಲಾಡಳಿತ ಗುರುತಿಸಿರುವ ಜಾಗದಲ್ಲಿ ಮಾತ್ರ ಮರಳು ತೆಗೆಯಬೇಕು. ಒಂದು ಮೀಟರ್‌ ಆಳದವರೆಗೂ ಮಾತ್ರ ಮರಳು ತೆಗೆಯಲು ಅವಕಾಶವಿದೆ. ಯಾರೂ ನಿಯಮಗಳನ್ನು ಉಲ್ಲಂಘಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.

ನಾನ್‌ ಸಿಆರ್‌ಝೆಡ್ ವ್ಯಾಪ್ತಿಯಲ್ಲೂ ಮರಳು ತೆಗೆಯಲು ಟೆಂಡರ್ ಕರೆಯಲಾಗಿದ್ದು, ಬುಧವಾರ ಕೊನೆಯ ದಿನ. ಟೆಂಡರ್ ಪ್ರಕ್ರಿಯೆ ಮುಗಿದ ತಕ್ಷಣ ಮರಳುಗಾರಿಕೆ ಆರಂಭವಾಗಲಿದೆ. ಈ ಭಾಗದಲ್ಲಿ ದೊರೆಯುವ ಮರಳು ಸಂಪೂರ್ಣವಾಗಿ ಸರ್ಕಾರಿ ಕಾಮಗಾರಿಗಳಿಗೆ ಮೀಸಲಾಗಿದೆ. ಲೋಕೋಪಯೋಗಿ ಇಲಾಖೆಯ ಕಾಮಗಾರಿಗಳು ಹಾಗೂ ಸರ್ಕಾರದ ವಸತಿ ಯೋಜನೆಗಳಿಗೆ ಈ ಮರಳನ್ನು ಬಳಸಿಕೊಳ್ಳಲಾಗುವುದು ಎಂದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago