Featured

ಉಡುಪಿ ಮರಳುಗಾರಿಕೆ ಸಮಸ್ಯೆ ; ಹೃದಯಾಘಾತದಿಂದ ವ್ಯಕ್ತಿ ಸಾವು

ಉಡುಪಿ: ಮರಳುಗಾರಿಕೆ ಸಂಪೂರ್ಣ ಸ್ಥಗಿತಗೊಳಿಸಿದ ಕಾರಣ ನಿರ್ಮಾಣ ಕಾಮಗಾರಿಗೆ ಸಂಕಷ್ಟ ಎದುರಾಗಿದ್ದು ವಿವಿಧ ಕಟ್ಟಡ ನಿರ್ಮಾಣ ಗುತ್ತಿಗೆದಾರರು, ನೌಕರರು ಇದರ ವಿರುದ್ಧ ಬೀದಿಗಿಳಿದಿದ್ದಾರೆ. ಹೀಗೆ ಮರಳು ಹೋರಾಟದಲ್ಲಿ ಭಾಗವಹಿಸಿದ್ದ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಮರಳು ಗಣಿಗಾರಿಕೆಗೆ ಅನುಮತಿ ನೀಡಬೇಕೆಂದು ಹೋರಾಟ ನಡೆಸುತ್ತಿದ್ದ ಕಾಪುವಿನ ಹೆಜಮಾಡಿ ಗ್ರಾಮದ ನಿವಾಸಿ ಮಹಮ್ಮದ ಹನೀಫ್ (42) ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ.
ಮರಳುಗಾರಿಕೆಗೆ ಒತ್ತಾಯಿಸಿ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಹನೀಫ್ ಬಾಗವಹಿಸಿದ್ದ ವೇಳೆ ಇದ್ದಕ್ಕಿದ್ದಂತೆ ಉದ್ವೇಗಕ್ಕೆ ಒಳಗಾಗಿದ್ದಾರೆ. ಈ ವೇಳೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಮಣಿಪಾಲದ ಕೀಂಸಿ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲ ನೀಡದ ಕಾರಣ ಸಾವನ್ನಪ್ಪಿದ್ದಾರೆ.
3 ಮಕ್ಕಳು ಮತ್ತು ಪತ್ನಿಯೊಂದಿಗೆ ಬಾಡಿಗೆ ಮನೆಯಲ್ಲಿ ಹನೀಫ್ ವಾಸಿಸುತ್ತಿದ್ದರು, ಮರಳುಗಾರಿಕೆ ನಂಬಿ ಸಾಲ ಮಾಡಿಕೊಂಡಿದ್ದ ಹನೀಫ್ ಗೆ ಇತ್ತೀಚೆಗೆ ಸಾಲಗಾರರ ಕಾಟ ಹೆಚ್ಚಾಗಿತ್ತು ಎಂದು ಹೇಳಲಾಗಿದೆ.
ಹನೀಫ್ ಸುಮಾರು 6 ಲಕ್ಷ ರೂ. ಸಾಲ ಮಾಡಿ ಎರಡು ನಾಡದೋಣಿ ಖರೀದಿಸಿ ಮರಳುಗಾರಿಕೆ ನಡೆಸುತ್ತಿದ್ದರು. ಇದೀಗ ಜಿಲ್ಲೆಯಾದ್ಯಂತ ಮರಳುಗಾರಿಕೆ ಸಂಪೂರ್ಣ ಸ್ಥಗಿತವಾಗಿದ್ದು ಯಾವುದೇ ಕಾರಣಕ್ಕೆ ನದಿಯಿಂದ ಮರಳು ತೆಗೆವಂತಿಲ್ಲ ಎಂದ್ಬ ಸರ್ಕಾರ ಆದೇಶದಿಂದ ಕೆಲಸವಿಲ್ಲದೆ ಕುಳಿತಿದ್ದರು. ಇದೇ ಕಾರಣದಿಂದ ಪ್ರತಿಭಟನೆ ವೇಳೆ ಉದ್ವೇಗಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago