Featured

ಉಡುಪಿ : ಮರ ಕಡಿಯುತ್ತಿದ್ದ ವೇಳೆ , ಮೈಮೇಲೆ ಮರ ಬಿದ್ದು ಯುವಕ ಸಾವು – Vishwanews24

ಉಡುಪಿ : ಮರ ಕಡಿಯುತ್ತಿದ್ದ ವೇಳೆ , ಮೈಮೇಲೆ ಮರ ಬಿದ್ದು ಯುವಕ ಸಾವು

ಉಡುಪಿ: ಯಾವುದೇ ಸುರಕ್ಷತೆ ವಹಿಸದೆ ಮರ ಕಡಿಯುತ್ತಿದ್ದ ವೇಳೆ , ವ್ಯಕ್ತಿಯ ಮೈಮೇಲೆ ಮರ ಬಿದ್ದು ಮೃತ ಪಟ್ಟ ಘಟನೆ ಮಂಗಳವಾರ ಉಡುಪಿ ನಗರದಲ್ಲಿ ನಡೆದಿದೆ.

ಬಾಗಲಕೋಟೆ ಮೂಲದ, ಪ್ರಸ್ತುತ ಉಡುಪಿ ಬೀಡಿನಗುಡ್ಡೆ ನಿವಾಸಿಯಾಗಿರುವ ಸುರೇಶ ಸಂದಿಮನಿ (32) ಎಂಬವರು ಆ ಮೃತ ವ್ಯಕ್ತಿ.

ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ…ನೋಡಿ ಇಂದಿನ ದಿನ ಭವಿಷ್ಯ .. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಸುರೇಶ ಸಂದಿಮನಿಯವರನ್ನು, ಸುನಿಲ್ ಎಂಬಾತ ಕೆಲಸಕ್ಕೆಂದು ಕರೆದುಕೊಂಡು ಹೋಗಿದ್ದು, ಕಲ್ಸಂಕ ಬಳಿ ನಿಧಿ ಹೋಮ್ಸ್‌ಎಂಬ ಮನೆಯ ಹಿಂಭಾಗದಲ್ಲಿರುವ ಜಾಗದಲ್ಲಿ ಬೆಳೆದಿರುವ ಮರಗಳನ್ನು ಆಪಾದಿತರಾದ ಸುನೀಲ್‌ ಮತ್ತು ಜಾಗದ ಮಾಲಕರಾದ ಪ್ರಭಾಕರ ಸಾಲ್ಯಾನ್‌ರವರು ಯಾವುದೇ ಸುರಕ್ಷಾ ಕವಚವನ್ನು ನೀಡದೇ ನಿರ್ಲಕ್ಷ ವಹಿಸಿ ಮರ ಕಡಿಸಿದ್ದು, ಮಧ್ಯಾಹ್ನದ ವೇಳೆಗೆ ಕಡಿಯುತ್ತಿದ್ದ ಮರವು ತುಂಡಾಗಿ ಅವರ ಮೈಮೇಲೆ ಬಿದ್ದು, ಹೊಟ್ಟೆಗೆ ಸೊಂಟಕ್ಕೆ ಹಾಗೂ ಕಾಲುಗಳಿಗೆ ತೀವ್ರ ಗಾಯವಾಗಿ ಅಜ್ಜರಕಾಡು ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ. ಯಾವುದೇ ಸುರಕ್ಷತೆ ನೀಡದೆ ನಿರ್ಲಕ್ಷ್ಯ ವಹಿಸಿದ್ದು ಕಾರಣವಾಗಿದೆ ಎಂದು ದೂರಿನಲ್ಲಿ ದಾಖಲಿಸಿದ್ದಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕ ಮಂಡನೆ – Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

14 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago