ಉಡುಪಿ: ಯಾವುದೇ ಸುರಕ್ಷತೆ ವಹಿಸದೆ ಮರ ಕಡಿಯುತ್ತಿದ್ದ ವೇಳೆ , ವ್ಯಕ್ತಿಯ ಮೈಮೇಲೆ ಮರ ಬಿದ್ದು ಮೃತ ಪಟ್ಟ ಘಟನೆ ಮಂಗಳವಾರ ಉಡುಪಿ ನಗರದಲ್ಲಿ ನಡೆದಿದೆ.
ಬಾಗಲಕೋಟೆ ಮೂಲದ, ಪ್ರಸ್ತುತ ಉಡುಪಿ ಬೀಡಿನಗುಡ್ಡೆ ನಿವಾಸಿಯಾಗಿರುವ ಸುರೇಶ ಸಂದಿಮನಿ (32) ಎಂಬವರು ಆ ಮೃತ ವ್ಯಕ್ತಿ.
ಸುರೇಶ ಸಂದಿಮನಿಯವರನ್ನು, ಸುನಿಲ್ ಎಂಬಾತ ಕೆಲಸಕ್ಕೆಂದು ಕರೆದುಕೊಂಡು ಹೋಗಿದ್ದು, ಕಲ್ಸಂಕ ಬಳಿ ನಿಧಿ ಹೋಮ್ಸ್‌ಎಂಬ ಮನೆಯ ಹಿಂಭಾಗದಲ್ಲಿರುವ ಜಾಗದಲ್ಲಿ ಬೆಳೆದಿರುವ ಮರಗಳನ್ನು ಆಪಾದಿತರಾದ ಸುನೀಲ್ ಮತ್ತು ಜಾಗದ ಮಾಲಕರಾದ ಪ್ರಭಾಕರ ಸಾಲ್ಯಾನ್‌ರವರು ಯಾವುದೇ ಸುರಕ್ಷಾ ಕವಚವನ್ನು ನೀಡದೇ ನಿರ್ಲಕ್ಷ ವಹಿಸಿ ಮರ ಕಡಿಸಿದ್ದು, ಮಧ್ಯಾಹ್ನದ ವೇಳೆಗೆ ಕಡಿಯುತ್ತಿದ್ದ ಮರವು ತುಂಡಾಗಿ ಅವರ ಮೈಮೇಲೆ ಬಿದ್ದು, ಹೊಟ್ಟೆಗೆ ಸೊಂಟಕ್ಕೆ ಹಾಗೂ ಕಾಲುಗಳಿಗೆ ತೀವ್ರ ಗಾಯವಾಗಿ ಅಜ್ಜರಕಾಡು ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ. ಯಾವುದೇ ಸುರಕ್ಷತೆ ನೀಡದೆ ನಿರ್ಲಕ್ಷ್ಯ ವಹಿಸಿದ್ದು ಕಾರಣವಾಗಿದೆ ಎಂದು ದೂರಿನಲ್ಲಿ ದಾಖಲಿಸಿದ್ದಾರೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…