Featured

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಸಿವು ಮುಕ್ತ ದಿನಾಚರಣೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಸಿವು ಮುಕ್ತ ದಿನಾಚರಣೆ*

ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಬುಧವಾರ ಹಮ್ಮಿಕೊಳ್ಳಲಾದ ಹಸಿವು ಮುಕ್ತ ದಿನಾಚರಣೆಯನ್ನು ನಗರಸಭೆ ಉಪಾಧ್ಯಕ್ಷರಾದ ಶ್ರೀಮತಿ ರಜನಿ ಹೆಬ್ಬಾರ್ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಇಂದು ಲಕ್ಷಾಂತರ ಜನ ಒಂದು ಹೊತ್ತು ಊಟಕ್ಕಿಲ್ಲದವರು ನಮ್ಮ ದೇಶದಲ್ಲಿ ಇದ್ದಾರೆ. ಇಂತಹವರ ಹಸಿವು ನೀಗಿಸುವುದು ಬಹಳ ದೊಡ್ಡ ಪುಣ್ಯದ ಕೆಲಸ. ಅಂತಹ ಸಮಾಜಮುಖಿ ಕಾರ್ಯವನ್ನು ಮಲಬಾರ್ ಗೋಲ್ಡ್ ಮಾಡುತ್ತಿರುವುದು ಮಾದರಿ ಎನಿಸಿದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ಸೋಪ್ ಮತ್ತು ಮಾರ್ಜಕ ಮಾಜಿ ಅಧ್ಯಕ್ಷರಾದ ವೆರೇನಿಕ ಕರ್ನಾಲಿನೋ,ಉಡುಪಿ ಪತ್ರಕರ್ತ ಸಂಘದ ಅಧ್ಯಕ್ಷರಾದ ರಾಜೇಶ್ ಶೆಟ್ಟಿ, ನಾಗರಿಕ ಸೇವಾ ಸಮಿತಿ ಅಧ್ಯಕ್ಷರಾದ ನಿತ್ಯಾನಂದ ಒಳಕಾಡು,ಸಾಮಾಜಿಕ ಸೇವಕರಾದ ಝಹೀರ್ ಅಹ್ಮದ್ ಬೆಳಪು, ಮಾತನಾಡಿದರು.

ಮಲಬಾರ್ ಗೋಲ್ಡ್ ಉಡುಪಿ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್ ಪ್ರಸ್ತಾವಿಕವಾಗಿ ಮಾತನಾಡಿ ಮಲಬಾರ್ ಚಾರಿಟೇಬಲ್ ಟ್ರಸ್ಟ್ ನ ಸಾಮಾಜ ಕಾರ್ಯವನ್ನು ವಿವರಿಸಿದರು.

ವಿದ್ಯಾ ಸರಸ್ವತಿ ಅವರು ಹಸಿವಿನ ಬಗ್ಗೆ ಪೂರಕವಾಗಿ ಮಾತನಾಡಿದರು.. ಆಹಾರ ಪೊಟ್ಟಣಗಳನ್ನು ದಾನವಾಗಿ ನೀಡಿದ ದಾನಿಗಳಿಗೆ ಗುರುತಿಸಿ ಸನ್ಮಾನಿಸಲಾಯಿತು.

ಶಾಖಾ ವ್ಯವಸ್ಥಾಪಕ ಮುಸ್ತಫಾ , ಗುರುರಾಜ್,ಸಂದೀಪ್ ಸಪಾಳ್ಯ ಮಾರುಕಟ್ಟೆ ವ್ಯವಸ್ಥಾಪಕ ತಂಝಿಮ್ ಶಿರ್ವ ಉಪಸ್ಥಿತರಿದ್ದರು, ವಿಘ್ನೇಶ್ ಸ್ವಾಗತಿಸಿ ದಯಾನಂದ್ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

11 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago