ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮಂಗಳವಾರ ಹಮ್ಮಿಕೊಳ್ಳಲಾದ ಹಸಿವು ಮುಕ್ತ ದಿನಾಚರಣೆಯನ್ನು ಶಂಕರಪುರ ದ್ವಾರಕಮಯಿ ಮಠದ ಶ್ರೀಈಶ್ವರ ಗುರೂಜಿ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಇಂದು ಲಕ್ಷಾಂತರ ಜನ ಒಂದು ಹೊತ್ತು ಊಟಕ್ಕಿಲ್ಲದವರು ನಮ್ಮ ದೇಶದಲ್ಲಿ ಇದ್ದಾರೆ. ಇಂತಹವರ ಹಸಿವು ನೀಗಿಸುವುದು ಬಹಳ ದೊಡ್ಡ ಪುಣ್ಯದ ಕೆಲಸ. ಅಂತಹ ಸಮಾಜಮುಖಿ ಕಾರ್ಯವನ್ನು ಮಲಬಾರ್ ಗೋಲ್ಡ್ ಮಾಡುತ್ತಿರುವುದು ಮಾದರಿ ಎನಿಸಿದೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ವಿಶು ಶೆಟ್ಟಿ ಅಂಬಲಪಾಡಿ, ನಮ್ಮ ನಾಡ ಒಕ್ಕೂಟದ ಕರ್ನಾಟಕ ಪರ್ಯಾವರಣ ಸಂರಕ್ಷಣಾ ಸಮಿತಿಯ ಅಧ್ಯಕ್ಷ ಶೇಕ್ ವಾಹೀದ್ ದಾವೂದ್ ಮಾತನಾಡಿದರು.
ನಮ್ಮ ನಾಡ ಒಕ್ಕೂಟದ ರಾಜ್ಯಾಧ್ಯಕ್ಷ ಸಲೀಂ, ವಕೀಲ ರಫೀಕ್ ಖಾನ್, ಮಲಬಾರ್ ಗೋಲ್ಡ್ ಉಡುಪಿ ಶಾಖೆಯ ಸ್ಟೋರ್ ಸೇಲ್ಸ್ ಮೆನೇಜರ್ ಮುಸ್ತಫಾ ಎ.ಕೆ., ಸ್ಟೋರ್ ಮೆನೇಜರ್ ಪುರಂದರ ತಿಂಗಳಾಯ, ಜಿಆರ್‌ಎಂ ರಾಘವೇಂದ್ರ ನಾಯಕ್, ಮಾರುಕಟ್ಟೆ ವ್ಯವಸ್ಥಾಪಕ ತಂಝಿಮ್ ಶಿರ್ವ ಉಪಸ್ಥಿತರಿದ್ದರು. ಸಿಬ್ಬಂದಿ ಯದು ಕೃಷ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. ವ್ನಿೇಶ್ ಸ್ವಾಗತಿಸಿ ವಂದಿಸಿ ಕಾರ್ಯಕ್ರಮ ನಿರೂಪಿಸಿದರು
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…